ಅಯೋಧ್ಯೆಯ ಶ್ರೀ ರಾಮಮಂದಿರದ ಪ್ರಾಣ ಪ್ರತಿಷ್ಠೆ: ಬಿಜೆಪಿ ಹಿರಿಯ ನಾಯಕರಾದ ಎಲ್. ಕೆ ಅಡ್ವಾಣಿ, ಜೋಶಿಗೆ ಆಹ್ವಾನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಯೋಧ್ಯೆಯ ಶ್ರೀ ರಾಮಮಂದಿರದ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮಕ್ಕೆ ಬಿಜೆಪಿ ಹಿರಿಯ ನಾಯಕರಾದ ಎಲ್‌ಕೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಶಿ ಅವರಿಗೆ ಆಹ್ವಾನ ನೀಡಲಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ಮಂಗಳವಾರ ತಿಳಿಸಿದೆ.

ಈ ಕುರಿತು ಮಾಹಿತಿ ನೀಡಿದ್ದು, 2024ರ ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಮಂದಿರದ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಲಾಲ್ ಕೃಷ್ಣ ಅಡ್ವಾಣಿಜಿ ಮತ್ತು ರಾಮ ಮಂದಿರ ಚಳವಳಿಯ ಪ್ರವರ್ತಕ ಡಾ.ಮುರಳಿ ಮನೋಹರ್ ಜೋಶಿ ಜಿ ಅವರನ್ನ ಆಹ್ವಾನಿಸಿದ್ದೇನೆ ಎಂದು ತಿಳಿಸಿದ್ದಾರೆ.

ಇದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ರಾಮ ಮಂದಿರ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ಬಿಜೆಪಿಯ ಹಿರಿಯರಾದ ಎಲ್‌ಕೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಷಿ ಅವರ ವಯಸ್ಸನ್ನು ಪರಿಗಣಿಸಿ ಮಹಾಮಸ್ತಕಾಭಿಷೇಕ ಸಮಾರಂಭಕ್ಕೆ ಬರದಂತೆ ಮನವಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!