ಅಶ್ವತ್ಥ ವೃಕ್ಷ ಮಾರಣಾಂತಿಕ ಕ್ಯಾನ್ಸರ್‌ ಗುಣಪಡಿಸುತ್ತಾ..?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಅರಳಿ ಮರ (ಅಶ್ವತ್ಥ ವೃಕ್ಷ ) ಪ್ರಾಚೀನ ಕಾಲದಿಂದಲೂ ಭಾರತೀಯರಿಂದ ಅತ್ಯಂತ ಪವಿತ್ರವಾದ ಮರವೆಂದು ಪರಿಗಣಿಸಲ್ಪಟ್ಟಿದೆ. ಇದರ ರೆಂಬೆ-ಕೊಂಬೆ, ಹೂವು, ಹಣ್ಣು ಮತ್ತು ತೊಗಟೆ, ಎಲೆಗಳು ಅನೇಕ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಅರಳಿ ಮರದ ಎಲೆಗಳ ರಸವನ್ನು ಹರಿತವಾದ ವಸ್ತುಗಳಿಂದಾದ ಗಾಯಗಳಿಗೆ ಹಚ್ಚುವುದರಿಂದ ಗಾಯ ಬೇಗ ವಾಸಿಯಾಗುತ್ತದೆ. ಉರಿಯೂತ, ನೋವು ನಿವಾರಕವಾಗಿ ಕಾರ್ಯನಿರ್ವಹಿಸುತ್ತದೆ.

ಈ ಮರದ ತೊಗಟೆಯ ಸಾರವು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ತೊಗಟೆ ಮತ್ತು ಬೇರುಗಳಲ್ಲಿ ಕಂಡುಬರುವ ಸೈಟೊಸ್ಟೆರಾಲ್ ಡಿ ಗ್ಲೈಕೋಸೈಡ್ ಎಂಬ ಸಂಯುಕ್ತವು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ಅಧ್ಯಯನಗಳು ತೋರಿಸಿವೆ. ಮರದ ವಿವಿಧ ಭಾಗಗಳಲ್ಲಿ ಎಥೆನಾಲಿಕ್ ಸಾರಗಳು ಅನೇಕ ಬ್ಯಾಕ್ಟೀರಿಯಾಗಳ ವಿರುದ್ಧದ ಹೋರಾಟದಲ್ಲಿ ಸಹಾಯ ಮಾಡುತ್ತದೆ.

ಮರದ ತೊಗಟೆಯು ಮರೆವು ಕಾಯಿಲೆ ಗುಣಪಡಿಸುವಲ್ಲಿ ಕಾರ್ಯನಿರ್ವಹಿಸುತ್ತದೆ. ಪ್ರಿರಾಡಿಕಲ್‌ಗಳ ಪರಿಣಾಮವನ್ನು ಕಡಿಮೆ ಮಾಡುವ ಮೂಲಕ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡಿ, ನರಮಂಡಲಕ್ಕೆ ಸಂಬಂಧಿಸಿದ ಅಸ್ವಸ್ಥತೆಯನ್ನು ನಿವಾರಿಸುವಲ್ಲಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತದೆ ಎಂದು ಸಂಶೋಧನೆಗಳು ಹೇಳಿವೆ.

ಔಷಧಿಯನ್ನು ತೆಗೆದುಕೊಳ್ಳುವಾಗ ಬಹಳ ಎಚ್ಚರಿಕೆಯಿಂದ ಅಲ್ಪ ಪ್ರಮಾಣದಲ್ಲಿ ಸ್ವೀಕರಿಸಬೇಕು, ಇಲ್ಲದಿದ್ದರೆ ಅಡ್ಡ ಪರಿಣಾಮ ಬೀರುವ ಸಾಧ್ಯತೆ ಇದೆ. ಅರಳಿ ಮರದ ಔಷಧಿಯನ್ನು ತೆಗೆದುಕೊಳ್ಳುವ ಮೊದಲು ಆಯುರ್ವೇದ ವೈದ್ಯರನ್ನು ಸಂಪರ್ಕಿಸಿ ಅವರ ಸಲಹೆ ಮೇರೆಗೆ ಬಳಸುವುದು ಉತ್ತಮ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!