spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, September 19, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಆಜಾದ್ ಹಿಂದೂ ಸೇನೆ ಅಧ್ಯಕ್ಷರ ಹುಟ್ಟುಹಬ್ಬ: ಸ್ಯಾನಿಟೈಸರ್, ಮಾಸ್ಕ್ ವಿತರಣೆ

- Advertisement -Nitte

ದಿಗಂತ ವರದಿ ಚಾಮರಾಜನಗರ:

ಆಜಾದ್ ಹಿಂದೂ ಸೇನೆಯ ರಾಜ್ಯಾಧ್ಯಕ್ಷ ಎಂ.ಎಸ್.ಫೃಥ್ವಿರಾಜ್ ಅವರ 35 ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಅಜಾದ್ ಹಿಂದೂ ಸೇನೆಯ ಜಿಲ್ಲಾಧ್ಯಕ್ಷ ಶಿವುವಿರಾಟ್ ಮತ್ತು ಸ್ನೇಹಿತರು ನಗರದ ಸರ್ಕಾರಿ ಜಿಲ್ಲಾಸ್ಪತ್ರೆಯ ಮುಂಭಾಗ ಸಾರ್ವಜನಿಕರಿಗೆ ಸ್ಯಾನಿಟೈಸರ್, ಮಾಸ್ಕ್ ವಿತರಿಸಲಾಯಿತು.
ಸ್ಯಾನಿಟೈಸರ್, ಮಾಸ್ಕ್ ವಿತರಿಸಿದ ಅಜಾದ ಹಿಂದೂ ಸೇನೆಯ ಜಿಲ್ಲಾಧ್ಯಕ್ಷ ಶಿವುವಿರಾಟ್ ಮಾತನಾಡಿ, ನಮ್ಮ ಸಂಘಟನೆಯ ರಾಜ್ಯಾಧ್ಯಕ್ಷರಾದ ಎಂ.ಎಸ್.ಫೃಥ್ವಿರಾಜ್ ಅವರ ಹುಟ್ಟುಹಬ್ಬವನ್ನು ಕೋವಿಡ್ ಸಂದರ್ಭದಲ್ಲಿ ಸಾರ್ವಜನಿಕರಿಗೆ ಸ್ಯಾನಿಟೈಸರ್, ಮಾಸ್ಕ್ ವಿತರಿಸುವ ಮೂಲಕ ಸರಳವಾಗಿ ಆಚರಿಸಲಾಗಿದೆ. ಕೋವಿಡ್ ನಿಂದ ಮೃತಪಟ್ಟವರ ಅಂತ್ಯಸಂಸ್ಕಾರದ ಕಾರ್ಯದಲ್ಲಿ ನಿರಂತರವಾಗಿ ತೊಡಗಿಸಿಕೊಂಡಿರುವ ಕೊರೋನಾ ವಾರಿಯರ್ಸ್ ಆಗಿ ಕೆಲಸ ಮಾಡುತ್ತಿರುವ ಎಂ.ಎಸ್.ಫೃಥ್ವಿರಾಜ್ ಅವರಿಗೆ ಶ್ರೀ ಚಾಮರಾಜೇಶ್ವರಸ್ವಾಮಿ ಹೆಚ್ಚಿನ ಆರೋಗ್ಯ, ಆಯಸ್ಸು ಕರುಣಿಸಲಿ ಎಂದು ಪ್ರಾರ್ಥಿಸಿದರು.
ಈ ಸಂದರ್ಭದಲ್ಲಿ ಆಜಾದ್ ಹಿಂದೂ ಸೇನೆಯ ಟೌನ್ ಅಧ್ಯಕ್ಷರು ಟಗರು ಶಿವ, ಕಾರ್ಯಕರ್ತರಾದ ಬುಲೆಟ್ ಚಂದ್ರು ಮಹೇಶ್ , ರಾಘವೇಂದ್ರ , ಹರೀಶ್ , ಪ್ರಸನ್ನ ಕಿರಣ್ ನಾಯಕ ಇತರರು ಹಾಜರಿದ್ದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss