ಹೊಸದಿಗಂತ ಡಿಜಿಟಲ್ ಡೆಸ್ಕ್
ಮಹಿಲೆಯರ ಕುರಿತಾಗಿ ಅಸಭ್ಯ ಹೇಳಿಕೆ ನೀಡಿದ್ದ ಆರೋಪದ ಮೇಲೆ ಸಮಾಜವಾದಿ ಪಕ್ಷದ ಹಿರಿಯ ನಾಯಕ ಅಜಂ ಖಾನ್ ವಿರುದ್ಧ ಪ್ರಕರಣ ದಾಖಲಾಗಿದೆ.
ನವೆಂಬರ್ 29 ರಂದು ರಾಜಾ ರಾಮ್ಪುರ ಸದರ್ ಅಸೆಂಬ್ಲಿ ಉಪಚುನಾವಣೆಯ ಚುನಾವಣಾ ಸಭೆಯಲ್ಲಿ ಮಾತನಾಡುವ ವೇಳೆ ಅಜಂ ಖಾನ್ ಮಹಿಳೆಯರ ಬಗ್ಗೆ ಅವಹೇಳನಕಾರಿ ಪದಬಳಕೆ ಮಾಡಿದ್ದಾರೆ ಎಂದು ಮಹಿಳೆಯರು ದೂರಿದ್ದಾರೆ. ಎಸ್ಪಿಯ ಉಪಚುನಾವಣೆ ಅಭ್ಯರ್ಥಿ ಅಸೀಮ್ ಪರ ಖಾನ್ ಪ್ರಚಾರ ಮಾಡುತ್ತಿದ್ದರು.
ಗಂಜ್ ಪೊಲೀಸ್ ಠಾಣೆಗೆ ಆಗಮಿಸಿದ ಮಹಿಳೆಯರು ಖಾನ್ ಹೇಳಿಕೆಯ ಆಡಿಯೋ ಕ್ಲಿಪ್ ನೀಡಿ ಎಸ್ಪಿ ನಾಯಕನ ವಿರುದ್ಧ ದೂರು ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
2019 ರಲ್ಲಿ ಅಜಂ ಖಾನ್ ದ್ವೇಷ ಭಾಷಣ ಮಾಡಿದ್ದ ಪ್ರಕರಣದಲ್ಲಿ ನ್ಯಾಯಾಲಯವು ಮೂರು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದ್ದರಿಂದ ನಂತರ ಖಾನ್ ಅವರನ್ನು ಅನರ್ಹಗೊಳಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ರಾಜಾ ರಾಮ್ಪುರದಲ್ಲಿ ಉಪಚುನಾವಣೆ ನಡೆಯುತ್ತಿದೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ