Tuesday, June 28, 2022

Latest Posts

ಸಮಾಜವಾದಿ ಪಕ್ಷದ ಹಿರಿಯ ಮುಖಂಡ ಅಜಂ ಖಾನ್ ಆರೋಗ್ಯದಲ್ಲಿ ಏರುಪೇರು

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಲಖನೌದ ಸಿತಾಪುರ ಜೈಲಿನಲ್ಲಿರುವ ಸಮಾಜವಾದಿ ಪಕ್ಷದ ಹಿರಿಯ ಮುಖಂಡ ಅಜಂ ಖಾನ್ ಅವರ ಆರೋಗ್ಯ ಕ್ಷೀಣಿಸಿದೆ. ಇಂದು ಬೆಳಗ್ಗೆ ಅವರ ಆರೋಗ್ಯದಲ್ಲಿ ಏರುಪೇರಾದ ನಂತರ ಲಖನೌನ ಆಸ್ಪತ್ರೆಗೆ ಕಳುಹಿಸಲಾಯಿತು ಎಂದು ಕಾರಾಗೃಹದ ಅಧಿಕಾರಿಗಳು ತಿಳಿಸಿದ್ದಾರೆ.
ಕೋವಿಡ್-19 ಸೋಂಕಿಗೆ ತುತ್ತಾಗಿರುವ ಅಜಂ ಖಾನ್ ಅವರಿಗೆ ಬೆಳಗ್ಗೆ ಉಸಿರಾಟದಲ್ಲಿ ತೊಂದರೆ ಉಂಟಾಗಿತ್ತು. ಕೂಡಲೇ, ಜಿಲ್ಲಾಸ್ಪತ್ರೆಯ ವೈದ್ಯರ ತಂಡವೊಂದು ತಪಾಸಣೆ ನಡೆಸಿತು ಎಂದು ಸಿತಾಪುರ ಜಿಲ್ಲಾ ಕಾರಾಗೃಹದ ಅಧಿಕಾರಿ ಆರ್ ಎಸ್ ಯಾದವ್ ಹೇಳಿದ್ದಾರೆ.
ಪ್ರಾಥಮಿಕ ತಪಾಸಣೆ ವೇಳೆಯಲ್ಲಿ ಅವರ ಅಮ್ಲಜನಕದ ಪ್ರಮಾಣ ಕಡಿಮೆ ಇರುವುದು ಕಂಡುಬಂದಿತು ಬಳಿಕ ಉತ್ತಮ ಚಿಕಿತ್ಸೆಗಾಗಿ ಲಖನೌ ಆಸ್ಪತ್ರೆಗೆ ಸಲಹೆ ಮಾಡಲಾಯಿತು ಎಂದು ಅವರು ತಿಳಿಸಿದ್ದಾರೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss