ಆಜಾನ್ – ಭಜನೆ ಸಂಘರ್ಷ: ‘ಧ್ವನಿ ವರ್ಧಕ ಬಳಕೆ’ಗೆ ಶೀಘ್ರ ಮಾರ್ಗಸೂಚಿ ಪ್ರಕಟ.?

ಹೊಸ ದಿಗಂತ ಡಿಜಿಟಲ್ ಡೆಸ್ಕ್

ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕ, ಕಾನೂನುಬಾಹಿರವಾಗಿ ಲೌಡ್ ಸ್ಪೀಕರ್ ಅಳವಡಿಸಿರುವವರು ಅರ್ಜಿ ಹಾಕಿ ಅನುಮತಿ ಪಡೆಯಬೇಕು. ಅದಕ್ಕಾಗಿ ಅವರಿಗೆ 15 ದಿನ ಅಥವಾ 1 ತಿಂಗಳು ಕಾಲಾವಕಾಶ ನೀಡಲಾಗುವುದು ಎಂದು ಸಿಎಂ ಹೇಳಿದ್ದಾರೆ.
ಆಜಾನ್ – ಭಜನೆ ಸಂಘರ್ಷ ಹಿನ್ನೆಲೆ ಸಾರ್ವಜನಿಕ ಸ್ಥಳಗಳಲ್ಲಿ ಲೌಡ್ ಸ್ಪೀಕರ್ ಬಳಕೆ ಸಂಬಂಧ ಮಾರ್ಗಸೂಚಿ ಹೊರಡಿಸಲು ನಿರ್ಧರಿಸಲಾಗಿದ್ದು, ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಜಾನ್ – ಭಜನೆ ಸಂಘರ್ಷದ ಬಗ್ಗೆ ತುರ್ತು ಸಭೆ ನಡೆಸಿದರು.‌
ಸಭೆಯಲ್ಲಿ ಡಿಜಿ ಐಜಿಪಿ ಪ್ರವೀಣ್ ಸೂದ್, ಬೆಂಗಳೂರು ಪೊಲೀಸ್ ಕಮಿಷನರ್ ಕಮಲ್ ಪಂತ್ ಸೇರಿದಂತೆ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು .ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕ, ಕಾನೂನು ಬಾಹಿರವಾಗಿ ಲೌಡ್ ಸ್ಪೀಕರ್ ಅಳವಡಿಸಿರುವವರು ಅರ್ಜಿ ಹಾಕಿ ಅನುಮತಿ ಪಡೆಯಬೇಕು. ಅದಕ್ಕಾಗಿ ಅವರಿಗೆ 15 ದಿನ ಅಥವಾ 1 ತಿಂಗಳು ಕಾಲಾವಕಾಶ ನೀಡಲಾಗುವುದು. ಒಂದು ವೇಳೆ ಅನುಮತಿ ಪಡೆಯದೇ ಇದ್ದರೆ ಅಂತಹ ಧ್ವನಿವರ್ಧಕಗಳ ತೆರವು ಮಾಡಲಾಗುವುದು.
ಸಾರ್ವಜನಿಕ ಕಾರ್ಯಕ್ರಮಗಳಿಗೂ ಇದು ಅನ್ವಯಿಸಲಿದೆ. ಈ ಸಂಬಂಧ ಮಾರ್ಗಸೂಚಿ ಹೊರಡಿಸುವ ಸಾಧ್ಯತೆ ಇದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!