ಆಜಾನ್ ವಿವಾದ: ಬೆಂಗಳೂರಿನಲ್ಲಿ 250 ಮಸೀದಿಗಳಿಗೆ ನೋಟಿಸ್‌

ಹೊಸದಿಗಂತ ಡಿಜಿಟಲ್ ಡೆಸ್ಕ್

ರಾಜ್ಯದಲ್ಲಿ ಆಜಾನ್ ವಿವಾದದ ಬೆನ್ನೆಲ್ಲೇ ಕರ್ನಾಟಕದ ಮಸೀದಿಗಳಿಗೆ ಲೌಡ್ ಸ್ಪೀಕರ್ ಗಳನ್ನು ಅನುಮತಿ ನೀಡಲಾದ ಡೆಸಿಬಲ್ ಮಟ್ಟದಲ್ಲಿ ಬಳಸುವಂತೆ ಪೊಲೀಸರು ನೋಟಿಸ್ ನೀಡುತ್ತಿದ್ದಾರೆ.
ಈಗಾಗಲೇ ವಿವಿಧ ಸಂಘಟನೆಗಳು ಮಸೀದಿಗಳ ಮೇಲಿನ ಧ್ವನಿವರ್ಧಕಗಳು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ತೊಂದರೆ ಉಂಟುಮಾಡುತ್ತಿದ್ದು, ಅದನ್ನು ನಿಷೇಧಿಸುವಂತೆ ಒತ್ತಾಯಿಸಿ ಅಭಿಯಾನ ಪ್ರಾರಂಭಿಸಿದ್ದು, ಇದೀಗ ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ.
ಬೆಂಗಳೂರು ಒಂದರಲ್ಲೇ ಸುಮಾರು 250 ಮಸೀದಿಗಳು ಪೊಲೀಸರಿಂದ ನೋಟಿಸ್‌ಗಳನ್ನು ಸ್ವೀಕರಿಸಿದ್ದು, ಮಸೀದಿಯ ಸಿಬ್ಬಂದಿ ಲೌಡ್ ಸ್ಪೀಕರ್ ಶಬ್ದವನ್ನು ಅನುಮತಿ ನೀಡಲಾದ ಮಟ್ಟದಲ್ಲಿ ಇರಿಸುವ ಸಾಧನಗಳನ್ನು ಅಳವಡಿಸಲು ಪ್ರಾರಂಭಿಸಿದ್ದಾರೆ.
ಧಾರ್ಮಿಕ ಸಂಸ್ಥೆಗಳು, ಪಬ್‌ಗಳು, ರಾತ್ರಿ ಕ್ಲಬ್‌ಗಳು ಮತ್ತು ಇತರ ಸಂಸ್ಥೆಗಳು ಮತ್ತು ಸಮಾರಂಭಗಳಲ್ಲಿ ಶಬ್ದ ಮಾಲಿನ್ಯ ನಿಯಮಗಳ ಉಲ್ಲಂಘನೆಯನ್ನು ಪರಿಶೀಲಿಸುವಂತೆ ಕರ್ನಾಟಕ ಪೊಲೀಸ್ ಮಹಾನಿರ್ದೇಶಕ(ಡಿಜಿಪಿ) ಪ್ರವೀಣ್ ಸೂದ್ ಅವರು ಎಲ್ಲಾ ಪೊಲೀಸ್ ಆಯುಕ್ತರು, ಪೊಲೀಸ್ ಮಹಾನಿರೀಕ್ಷಕರು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!