Monday, October 2, 2023

Latest Posts

ಬೆಂಗಳೂರು ನಗರಕ್ಕೆ ನೂತನ ಪೊಲೀಸ್ ಆಯುಕ್ತರಾಗಿ ಬಿ ದಯಾನಂದ ನೇಮಕ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಬೆಂಗಳೂರು ನಗರದ ನೂತನ ಪೊಲೀಸ್‌ ಆಯುಕ್ತರಾಗಿ ಬಿ ದಯಾನಂದ ಅವರು ನೇಮಕವಾಗಿದ್ದು, ಹಾಲಿಯಾಗಿದ್ದ ಸಿ.ಎಚ್. ಪ್ರತಾಪ್ ರೆಡ್ಡಿ ಅವರನ್ನು ಆಂತರಿಕ ಭದ್ರತೆ ವಿಭಾಗದ ಡಿಜಿಪಿಯಾಗಿ ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

ಬೆಂಗಳೂರು ಪೊಲೀಸ್ ಆಯುಕ್ತರಾಗಿದ್ದ ಪ್ರತಾಪ್ ರೆಡ್ಡಿ ಅವರು ಆಂತರಿಕ ಭದ್ರತೆ ಡಿಜಿಪಿಯಾಗಿ ವರ್ಗಾವಣೆಯಾಗಿದ್ದಾರೆ. ಅಲ್ಲದೆ ಸಿಐಡಿ ಡಿಜಿಯಾಗಿ ಬೆಂಗಳೂರು ನಗರ ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಎಂ.ಎ. ಸಲೀಂ ವರ್ಗಾವಣೆಯಾಗಿದ್ದಾರೆ. ಇನ್ನು ಹಿರಿಯ ಅಧಿಕಾರಿ ಶರತ್ ಚಂದ್ರ ಅವರನ್ನು ಗುಪ್ತಚರ ಇಲಾಖೆ ಎಡಿಜಿಪಿಯಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

ಬೆಂಗಳೂರು ನಗರಕ್ಕೆ ಕಳೆದ ವರ್ಷ ಮೇ 17,2022ರಂದು ಪ್ರತಾಪ್‌ ರೆಡ್ಡಿ ಅವರ ನೇಮಕವಾಗಿತ್ತು. ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಿರ್ಗಮಿತ ಕಮೀಷನರ್ ಕಮಲ್ ಪಂತ್ ಅವರು ಪ್ರತಾಪ್ ರೆಡ್ಡಿ ಅವರಿಗೆ ಬ್ಯಾಟನ್ ಹಸ್ತಾಂತರಿಸಿದ್ದರು. ಆಗ ರಾಜ್ಯ ಬಿಜೆಪಿ ಸರ್ಕಾರ ಸೋಮವಾರ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸೇರಿದಂತೆ ಹಲವು ಐಪಿಎಸ್ ಅಧಿಕಾರಿಗಳನ್ನು ಎತ್ತಂಗಡಿ ಮಾಡಿ, ನೂತನ ನಗರ ಪೊಲೀಸ್ ಆಯುಕ್ತರಾಗಿ ಆಗಿ ಪ್ರತಾಪ್ ರೆಡ್ಡಿ ಅವರನ್ನು ನೇಮಕ ಮಾಡಿ ಆದೇಶ ಪ್ರಕಟಿಸಿತ್ತು.

ಕಮಲ್ ಪಂತ್ ಅವರನ್ನು ಪೊಲೀಸ್ ತರಬೇತಿ ವಿಭಾಗದ ಡಿಜಿಪಿ ಆಗಿ ವರ್ಗಾಯಿಸಲಾಗಿದೆ. ಕಾನೂನು ಸುವ್ಯವಸ್ಥೆ ಎಡಿಜಿಪಿಯಾಗಿ ಕರ್ತವ್ಯ ನಿರ್ವಹಿಸಿರುವ ಸಿ. ಹೆಚ್. ಪ್ರತಾಪ್ ರೆಡ್ಡಿ ಅವರು ಪೊಲೀಸ್ ಇಲಾಖೆಯಲ್ಲಿ ಸಾಕಷ್ಟು ಹೆಸರು ಮಾಡಿದ್ದರು.

ಇನ್ನು ಸಿಐಡಿ ಎಡಿಜಿಪಿಯಾಗಿದ್ದ ಶರತ್‌ ಚಂದ್ರ ಅವರು ಬಿ ದಯಾನಂದ್‌ ಅವರ ಜಾಗಕ್ಕೆ ಅಂದರೆ ಗುಪ್ತಚರ ಇಲಾಖೆ ಎಡಿಜಿಪಿಯಾಗಿ ವರ್ಗಾವಣೆಯಾಗಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!