ಹೊಸದಿಗಂತ ವರದಿ ಬೆಳಗಾವಿ:
ಕಾಂಗ್ರೆಸ್ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿಯು ಬೆಳಗಾವಿ ಘಟಕದಿಂದ ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ ಸತತ ನಾಲ್ಕನೇ ದಿನವೂ ಮುಂದುವರಿಯಿತು.
ಧರಣಿಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಶಾಸಕ ಡಾ. ವಿಶ್ವನಾಥ ಪಾಟೀಲ ಹಾಗೂ ಬಿಜೆಪಿ ಮುಖಂಡ ವಿಜಯ ಮೆಟಗುಡ್ಡ, ಸಚಿವ ಬಿ. ನಾಗೇಂದ್ರ ವಿರುದ್ಧ ಸಿಬಿಐ ಅಧಿಕಾರಿಗಳು ಮೂರು ದೋಷಾರೋಪ ಪಟ್ಟಿಗಳನ್ನು ಸಲ್ಲಿಸಿದ್ದು, ಜಾರಿ ನಿರ್ದೇಶನಾಲಯವೂ ಒಂದು ಚಾರ್ಜ್ಶೀಟ್ ಸಲ್ಲಿಸಿದೆ. ಪ್ರಕರಣದ ಹಿನ್ನೆಲೆಯಲ್ಲಿ ನಾಗೇಂದ್ರ ಅವರನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿತ್ತು. ಬಳಿಕ ಅವರು ಜಾಮೀನಿನ ಮೇಲೆ ಬಿಡುಗಡೆಯಾದವರಿಗೆ ಭ್ರಷ್ಠಾಚಾರಿಗಳಿಗೆ ಕಾಂಗ್ರೆಸ್ ಪಕ್ಷದಲ್ಲಿ ಮತ್ತೆ ಸಚಿವ ಸ್ಥಾನವನ್ನು ನೀಡಿದ್ದಾರೆಂದು ಅಸಮಾಧಾನ ಹೊರ ಹಾಕಿದರು.

ಬೃಹತ್ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಹಾಗೂ ನಿಗಮದಲ್ಲಿ ಅವ್ಯವಹಾರ ನಡೆದಿರುವುದು ತಿಳಿದಿದ್ದರೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಾಗೇಂದ್ರ ಅವರಿಗೆ ಮತ್ತೆ ಸಚಿವ ಸ್ಥಾನ ನೀಡಿರುವುದು ದಲಿತ ಸಮುದಾಯಕ್ಕೆ ಮಾಡಿರುವ ದೊಡ್ಡ ಅನ್ಯಾಯ ಎಂದು ಡಿಕೆಶಿ ಸರ್ಕಾರದ ವಿರುದ್ದ ಗಂಭೀರವಾಗಿ ಆರೋಪಿಸಿ, ಕೂಡಲೇ ಬಿ. ನಾಗೇಂದ್ರ ಅವರಿಂದ ಸಿಎಂ ರಾಜೀನಾಮೆ ಪಡೆಯಬೇಕು ಎಂದು ಪತ್ರಿಭಟನೆಯಲ್ಲಿ ಆಗ್ರಹಿಸಿದರು.
ಬಿಜೆಪಿ ಮುಖಂಡ ಪೃಥ್ವಿ ಕತ್ತಿ ಮಾತನಾಡಿ, ಎರಡು ವರ್ಷಗಳ ಹಿಂದೆ ತೆಲಂಗಾಣ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ರಾಜ್ಯದ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ವಾಲ್ಮೀಕಿ ನಿಗಮದಲ್ಲಿ ಭಾರೀ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದರು. ನಿಗಮದಲ್ಲಿ ಮೀಸಲಿಟ್ಟಿದ್ದ ಸುಮಾರು ₹187 ಕೋಟಿ ಹಣವನ್ನು ಅಂದಿನ ಸಚಿವರಾಗಿದ್ದ ಬಿ. ನಾಗೇಂದ್ರ ಅವರ ಸೂಚನೆಯ ಮೇರೆಗೆ ಅಕ್ರಮವಾಗಿ ವಿವಿಧ ಖಾಸಗಿ ಖಾತೆಗಳಿಗೆ ವರ್ಗಾಯಿಸಿ ಭ್ರಷ್ಠಾಚಾರದ ಆರೋಪಿಗೆ ಮತ್ತೆ ಕಾಂಗ್ರೆಸ್ ನಲ್ಲಿ ಸಚಿವ ಸ್ಥಾನ ನೀಡಿರುವು ನಾಚಿಕೆಗೆಡಿನ ಸಂಗತಿ ಎಂದರು.
ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ವಿಧಾನಸಭೆಯಲ್ಲಿ ಒಪ್ಪಿಕೊಂಡಿದ್ದಾರೆ ಬಿ. ನಾಗೇಂದ್ರ ಅವರು ರಾಜೀನಾಮೆ ನೀಡದಿದ್ದರೆ ಹೋರಾಟವನ್ನು ಮತ್ತಷ್ಟು ಉಗ್ರಗೊಳಿಸುವುದು ಅನಿವಾರ್ಯವಾಗಲಿದೆ ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಇದನ್ನೂ ಓದಿ:
ಈ ವೇಳೆ ಬಿಜೆಪಿ ಮುಖಂಡ ಎಂ.ಬಿ. ಜಿರಲಿ, ಎಫ್.ಎಸ್. ಸಿದ್ದನಗೌಡ್ರ, ಸುಭಾಷ್ ತುರಮರಿ, ರಾಚಯ್ಯ ಹಿರೇಮಠ, ಮಲ್ಲಿಕಾರ್ಜುನ ಮಾದಮ್ಮನವರ, ಸತ್ಯಪ್ಪ ನಾಯಿಕ, ಸಂದೀಪ ದೇಶಪಾಂಡೆ, ಗುರುಪಾದ ಕಳ್ಳಿ, ಗುರುರಾಜ ಕುಲಕರ್ಣಿ, ಸಚಿನ್ ಕಡಿ, ಪ್ರಫುಲ್ ಪಾಟೀಲ, ಸುನೀಲ ಮರಕುಂಬಿ, ಬಸವರಾಜ ನೇಸರಗಿ, ಲಕ್ಕಪ್ಪ ಕಾರಗಿ, ವಿಶಾಲ ಬೋಗುರ, ಪ್ರವೀಣ್ ಶಿಂಗಾರಿ, ಪ್ರಶಾಂತ್ ಅಮ್ಮಿನಭಾವಿ, ಶಂಭು ಹೂಲಿ, ಬಾಹುಬಲಿ ನಾಗನೂರಿ, ಸುರೇಶ್ ತೆರಣಿ, ಶ್ರೀಶೈಲ ಮಠಪತಿ, ಶಿವನಗೌಡ ಮದವಾಲ, ಕೆಂಪಣ್ಣ ದೇಸಾಯಿ, ನಾಗಪ್ಪ ಸಂಗೋಳ್ಳಿ, ಶಿವಪ್ರಸಾದ್ ಪಾಟೀಲ, ರಿತೇಶ್ ಪಾಟೀಲ ಸೇರಿದಂತೆ ಬಿಜೆಪಿಯ ಹಲವು ಮುಖಂಡರು ಕಾರ್ಯಕರ್ತರು ಇದ್ದರು.



