Thursday, July 7, 2022

Latest Posts

ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿದ ಬಿಎಸ್’ವೈ: ಹಂಗಾಮಿ ಸಿಎಂ ಆಗಿರುವಂತೆ ಸೂಚನೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿರುವ ಬಿ.ಎಸ್. ಯಡಿಯೂರಪ್ಪ ಅವರಿಗೆ ರಾಜ್ಯಪಾಲರು ಹಂಗಾಮಿ ಸಿಎಂ ಆಗಿರುವಂತೆ ಸೂಚನೆ ನೀಡಿದ್ದಾರೆ.
ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು, ಮುಂದಿನ ದಿನಗಳಲ್ಲಿ ಹಂಗಾಮಿ ಸಿಎಂ ಆಗಿರುವಂತೆ ಸೂಚಿಸಿದ್ದಾರೆ.
ಹಾಗಾಗಿ ನೂತನ ಸಿಎಂ ಆಯ್ಕೆಯಾಗುವವರೆಗೆ ಯಡಿಯೂರಪ್ಪನವರು ಹಂಗಾಮಿ ಸಿಎಂ ಆಗಿ ಮುಂದುವರೆಯಲಿದ್ದಾರೆ.
ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಇಂದಿಗೆ 2ವರ್ಷ ಪೂರ್ಣಗೊಂಡಿದ್ದು, ಇಂದಿನ ಸಾಧನಾ ಸಮಾವೇಶದಲ್ಲಿ ಬಿಎಸ್ ವೈ ರಾಜೀನಾಮೆ ಘೋಷಿಸಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss