ಬಳ್ಳಾರಿ ಗ್ರಾಮೀಣ ಕ್ಷೇತ್ರದ ಅಭ್ಯರ್ಥಿಯಾಗಿ ಬಿ.ಶ್ರೀರಾಮುಲು ನಾಮಪತ್ರ ಸಲ್ಲಿಕೆ

ಹೊಸದಿಗಂತ ವರದಿ ಬಳ್ಳಾರಿ:

ಗ್ರಾಮೀಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಸಚಿವ ಬಿ.ಶ್ರೀರಾಮುಲು ಅವರು ಮಂಗಳವಾರ ನಾಮಪತ್ರ ಸಲ್ಲಿಸಿದರು.

ಅಪಾರ ಬೆಂಬಲಿಗರು, ಅಭಿಮಾನಿಗಳು, ಕಾರ್ಯಕರ್ತರೊಂದಿಗೆ ನಗರದಲ್ಲಿ ತೆರೆದ ವಾಹನದಲ್ಲಿ ಬೃಹತ್ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಉಮೇದುವಾರಿಕೆ ಸಲ್ಲಿಸಿದರು.

ನಗರದ ಕಾಲ್‌ ಬಜಾರ್ ಪ್ರದೇಶದ ಟಿಬಿ ಸ್ಯಾನಿಟೆರಿಯಂ ಬಳಿಯಿಂದ ಬೃಹತ್ ಮೆರವಣಿಗೆ ಮೂಲಕ ಬೃಹತ್ ಶಕ್ತಿ ಪ್ರದರ್ಶನ ನಡಸಿದರು. ಮೆರವಣಿಗೆ ವೇಳೆ ದಾರಿಯುದ್ದಕ್ಕೂ ಜನಸ್ತೋಮವೇ ನೆರೆದಿತ್ತು. ಜನರನ್ನು ಕೈಬೀಸುತ್ತಾ ಹಸನ್ಮುಖಿಯಾಗಿ ಮೆರವಣಿಗೆಯಲ್ಲಿ ಅಭ್ಯರ್ಥಿ ಬಿ.ಶ್ರೀರಾಮುಲು ಶಕ್ತಿ ಪ್ರದರ್ಶನಕ್ಕೆ ಸಾಕ್ಷಿಯಾದರು.

ಈ ವೇಳೆ ಸಂಸದ ವೈ.ದೇವೇಂದ್ರಪ್ಪ, ನಗರ ಶಾಸಕ ಗಾಲಿ ಸೋಮಶೇಖರ್ ರೆಡ್ಡಿ, ಮಾಜಿ ಸಂಸದರಾದ ಸಣ್ಣ ಫಕೀರಪ್ಪ, ಜೆ.ಶಾಂತಾ, ಬಿಜೆಪಿ ಜಿಲ್ಲಾಧ್ಯಕ್ಷ ಗೋನಾಳ್ ಮುರಹರಗೌಡ, ಮಾಜಿ ಶಾಸಕ, ಕಂಪ್ಲಿ ಕ್ಷೇತ್ರದ ಅಭ್ಯರ್ಥಿ ಟಿ.ಎಚ್.ಸುರೇಶ್ ಬಾಬು, ಗ್ರಾಮಾಂತರ ಮುಖಂಡ, ಓಬಳೇಶ್, ಸಚಿವ ಶ್ರೀರಾಮುಲು‌ ಅವರ‌ ಪತ್ನಿ ಭಾಗ್ಯಲಕ್ಷ್ಮೀ, ವಿ.ಕೆ.ಬಸಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!