ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಭರ್ಜರಿ ಗೆಲುವು ಸಾಧಿಸಿದ್ದಾರೆ. ಸದ್ಯದ ಮಾಹಿತಿ ಪ್ರಕಾರ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ 1.70 ಲಕ್ಷಕ್ಕೂ ಅಧಿಕ ಮತಗಳಿಂದ ಗೆಲುವು ಸಾಧಿಸಿದ್ದಾರೆ. ಅಧಿಕೃತ ಮಾಹಿತಿ ಹೊರಬರುವುದಷ್ಟೇ ಬಾಕಿ ಇದೆ.
ವಿಶೇಷವೆಂದರೆ ಕಳೆದ ನಾಲ್ಕು ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಬೇರೆ ಪಕ್ಷಗಳಿಗೆ ಸಾಧ್ಯವಾಗಲಿಲ್ಲ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ ರಾಘವೇಂದ್ರ ಅವರು ಸತತ ನಾಲ್ಕು ಬಾರಿ ಆಯ್ಕೆಯಾಗಿದ್ದಾರೆ.
ಗೀತಾ ಶಿವರಾಜ್ ಕುಮಾರ್ ಅವರು 2ನೇ ಬಾರಿಗೆ ಬಿ.ವೈ ರಾಘವೇಂದ್ರ ಎದುರು ಸೋಲುಂಡಿದ್ದಾರೆ. ಇನ್ನು, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ ಜಯಭೇರಿ ಬಾರಿಸುತ್ತಿದ್ದಂತೆ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿದೆ.