ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಿ.ವೈ.ರಾಘವೇಂದ್ರ ನಾಮಪತ್ರ ಸಲ್ಲಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂದು ಶಿವಮೊಗ್ಗ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಬಿ.ವೈ.ರಾಘವೇಂದ್ರ ನಾಮಪತ್ರ ಸಲ್ಲಿಸಿದ್ದಾರೆ.

ಬಿಸಿಲಿನ ಝಳದ ನಡುವೆಯೂ ಬಿ.ವೈ. ರಾಘವೇಂದ್ರ ಶ್ರೇಷ್ಠ ಪಾರ್ಕ್ ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ಮೂಲಕ ಆಗಮಿಸಿ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಎಚ್‌ಡಿ ಕುಮಾರಸ್ವಾಮಿ ಸೇರಿದಂತೆ 28 ಮಂದಿ ಉಪಸ್ಥಿತರಿದ್ದರು.

ಈ ವೇಳೆ ಮಾತನಾಡಿದ ಬಿ.ವೈ.ರಾಘವೇಂದ್ರ ನಾಮಪತ್ರ ಸಲ್ಲಿಕೆ ಮೆರವಣಿಗೆ ವೇಳೆ ಬಿಸಿಲನ್ನೂ ಲೆಕ್ಕಿಸದೇ ಹರಿದು ಬಂದ ಜನಸಾಗರ ಶಿವಮೊಗ್ಗದಿಂದ ಈ ಬಾರಿಯೂ ನಾನು ಗೆಲುವು ಸಾಧಿಸುತ್ತೇನೆ ಎಂಬ ವಿಶ್ವಾಸ ಮೂಡಿಸಿದೆ. ಎಲ್ಲೆಡೆ ಮೋದಿ ಪರವಾದ ಅಲೆ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!