ಬಿ.ವೈ.ರಾಘವೇಂದ್ರ ಮೂರುವರೆ ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ: ಬಿ.ಎಸ್.ಯಡಿಯೂರಪ್ಪ ಭವಿಷ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಎರಡನೇ ಹಂತದ ಲೋಕಸಭೆ ಚುನಾವಣೆಗೆ ಸಿದ್ಧತೆ ನಡೆದಿದೆ. ರಾಜಕೀಯ ನಾಯಕರು ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಇದೇ ವೇಳೆ ಬಿ.ವೈ.ರಾಘವೇಂದ್ರ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ 3 ರಿಂದ 3.5 ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ಮಾಜಿ ಸಿಎಂ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರಾಘವೇಂದ್ರ ಕ್ಷೇತ್ರದಲ್ಲಿ ನಡೆಯುತ್ತಿರುವ ಉತ್ತಮ ಕೆಲಸಗಳ ಕುರಿತು ಯಡಿಯೂರಪ್ಪ ಸುದ್ದಿಗಾರರಿಗೆ ತಿಳಿಸಿದರು. ರಾಜ್ಯದಲ್ಲಿ ಅನುಷ್ಠಾನಗೊಂಡಿರುವ ನೀರಾವರಿ ಯೋಜನೆಗಳು ಮತ್ತು ಕೆರೆ ಪುನಶ್ಚೇತನ ಯೋಜನೆಗಳಂತಹ ಅನೇಕ ಯೋಜನೆಗಳು ಉತ್ತಮ ಫಲಿತಾಂಶವನ್ನು ತೋರಿಸಿವೆ. ಇವೆಲ್ಲವೂ ಗೆಲುವಿಗೆ ಸಹಕಾರಿ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!