ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಬಿ.ವೈ ವಿಜಯೇಂದ್ರ (BY Vijayendra) ಆಯ್ಕೆಯಾಗಿದ್ದಾರೆ. ಈ ಮೂಲಕ ಶಿಕಾರಿಪುರದ ಶಾಸಕರಿಗೆ ಕೇಂದ್ರ ಬಿಜೆಪಿ ದೀಪಾವಳಿ ಗಿಫ್ಟ್ ಕೊಟ್ಟಿದ್ದು, ಕಾರ್ಯಕರ್ತರು ಹಾಗೂ ಗಣ್ಯರಿಂದ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ.
ಹೆಚ್.ಡಿ ಕುಮಾರಸ್ವಾಮಿ
ಕರ್ನಾಟಕ ಬಿಜೆಪಿ ಪಕ್ಷದ ಅಧ್ಯಕ್ಷರಾಗಿ ನೇಮಕಗೊಂಡಿರುವ ಶಾಸಕ ಬಿ.ವೈ ವಿಜಯೇಂದ್ರ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಯುವನಾಯಕರಾಗಿ ಸಂಘಟನೆಯಲ್ಲಿ ಈಗಾಗಲೇ ಕ್ರಿಯಾಶೀಲರಾಗಿರುವ ಅವರಿಗೆ ಕಿರಿಯ ವಯಸ್ಸಿನಲ್ಲಿಯೇ ಬಹುದೊಡ್ಡ ಜವಾಬ್ದಾರಿ ಅರಸಿ ಬಂದಿದೆ. ತಮಗೆ ವಹಿಸಿರುವ ಈ ಗುರುತರ ಹೊಣೆಯನ್ನು ಅವರು ಸಮರ್ಥವಾಗಿ ನಿಭಾಯಿಸುತ್ತಾರೆ ಎಂಬ ವಿಶ್ವಾಸ ನನಗಿದೆ. ವಿಜಯೇಂದ್ರ ಅವರಿಗೆ ಶುಭವಾಗಲಿ ಎಂದು ಹಾರೈಸುತ್ತೇನೆ ಎಂದು ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಬಸವರಾಜ ಬೊಮ್ಮಾಯಿ
ರಾಜ್ಯ ಬಿಜೆಪಿಯ ನೂತನ ಅಧ್ಯಕ್ಷರಾಗಿ ನಿಯುಕ್ತಿಗೊಂಡ ಯುವ ನಾಯಕ ವಿಜಯೇಂದ್ರ ಅವರಿಗೆ ಹಾರ್ದಿಕ ಅಭಿನಂದನೆಗಳು. ನಿಮ್ಮ ಅಧ್ಯಕ್ಷ ಅವಧಿಯಲ್ಲಿ ಪಕ್ಷ ಮತ್ತಷ್ಟು ಸಂಘಟನಾತ್ಮಕವಾಗಿ ಬಲಗೊಂಡು ಇನ್ನಷ್ಟು ಶಕ್ತಿಯುತವಾಗಿ ಹೊರಹೊಮ್ಮಲಿ ಎಂದು ಆಶಿಸುತ್ತೇನೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅಭಿನಂದಿಸಿದ್ದಾರೆ.