ಹೊಸದಿಗಂತ ವರದಿ, ಬೀದರ್:
ರಾಜ್ಯದೆಲ್ಲೆಡೆ ಬರದ ಛಾಯೆ ಆವರಿಸಿದ್ದರೂ ಕಾಂಗ್ರೆಸ್ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳದಿರುವ ಹಿನ್ನೆಲೆಯಲ್ಲಿ ಪಕ್ಷದ ವತಿಯಿಂದ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಖಟಕ್ ಚಿಂಚೋಳಿ ಗ್ರಾಮಕ್ಕೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಜೊತೆ ಮಾಜಿ ಶಾಸಕ ಪ್ರಕಾಶ್ ಖಂಡ್ರೆ ಅವರು ಬರ ವೀಕ್ಷಣೆ ಮಾಡಿದರು .
ಎಲ್ಲೆಡೆ ಮಳೆಯಿಲ್ಲದೆ ಬೆಳೆಗಳು ಸಂಪೂರ್ಣ ನಾಶವಾಗಿದ್ದು, ಕುಡಿಯುವ ನೀರಿಗೂ ಪರಿತಪಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ರೈತರನ್ನು ಸಂಪೂರ್ಣ ನಿರ್ಲಕ್ಷಿಸಿರುವ ಸರ್ಕಾರವನ್ನು ಮುಂಬರುವ ಅಧಿವೇಶನದಲ್ಲಿ ಎಚ್ಚರಿಸಿ ಸೂಕ್ತ ಪರಿಹಾರ ಕೊಡಿಸುವ ನಿಟ್ಟಿನಲ್ಲಿ ಹೋರಾಟ ನಡೆಸುವುದಾಗಿ ಬಿ.ವೈ ವಿಜಯೇಂದ್ರ ಅವರು ಭರವಸೆ ನೀಡಿದರು ..
ಈ ಸಂದರ್ಭದಲ್ಲಿ ಜಿಲ್ಲೆಯ ಶಾಸಕರು, ಹಿರಿಯರು, ಮುಖಂಡರು ಮತ್ತು ಕಾರ್ಯಕರ್ತರು ಜೊತೆಗಿದ್ದರು.