ಹುಚ್ಚರಾಯಸ್ವಾಮಿ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಬಿ.ವೈ. ವಿಜಯೇಂದ್ರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ಬಿ.ವೈ. ವಿಜಯೇಂದ್ರ ಅವರು ಇಂದು ಹುಚ್ಚರಾಯಸ್ವಾಮಿ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಶಿಕಾರಿಪುರ‌ ಕ್ಷೇತ್ರದಿಂದ ಬಿ.ವೈ.‌ವಿಜಯೇಂದ್ರ ಅವರು ಚೊಚ್ಚಲ ಬಾರಿಗೆ ವಿಧಾನಸಭೆಗೆ ಆಯ್ಕೆಯಾಗಿದ್ದಾರೆ. ಇಂದು ಪ್ರಮಾಣವಚನ ಸ್ವೀಕರಿಸಲು ವಿಧಾನಸೌಧಕ್ಕೆ ಆಗಮಿಸಿದ ವಿಜಯೇಂದ್ರ ಒಳ ಪ್ರವೇಶಿಸುವ ಮುನ್ನ ಶಕ್ತಿಸೌಧದ ಮೆಟ್ಟಿಲುಗಳಿಗೆ ನಮಸ್ಕರಿಸಿದರು. ಬಳಿಕ ವಿಧಾನಸಭೆ ಪ್ರವೇಶಿಸಿ, ಹುಚ್ಚರಾಯಸ್ವಾಮಿ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದರು.

ಶಿಕಾರಿಪುರ ಕ್ಷೇತ್ರವನ್ನು ಮಾಜಿ ಸಿಎಂ ಬಿ.ಎಸ್​. ಯಡಿಯೂರಪ್ಪ ಅವರು ಪ್ರತಿನಿಧಿಸುತ್ತಿದ್ದರು. ಆದರೆ ಚುನಾವಣಾ ರಾಜಕೀಯದಿಂದ ಬಿಎಸ್​ವೈ ನಿವೃತ್ತಿ ಪಡೆದುಕೊಂಡಿರುವ ಹಿನ್ನೆಲೆಯಲ್ಲಿ ಅವರ ಸ್ಥಾನವನ್ನು ಅವರ ಪುತ್ರ ಬಿ.ವೈ. ವಿಜಯೇಂದ್ರ ತುಂಬಲು ಮುಂದಾಗಿದ್ದಾರೆ. ಮೊದಲ ಬಾರಿಗೆ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ ವಿಜಯೇಂದ್ರ 11,008 ಮತಗಳ ಅಂತರಗಳಿಂದ ಗೆಲುವು ಕಂಡರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here