ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಮಳೆ ಅಭಾವ ಉಂಟಾಗಿದ್ದು, ಕಾಂಗ್ರೆಸ್ಗೆ ಇದು ಶುಭಶಕುನವಲ್ಲ ಎಂದು ಶಿಕಾರಿಪುರದ ಬಿಜೆಪಿ ಶಾಸಕ ಬಿ.ವೈ. ವಿಜಯೇಂದ್ರ ಟ್ವೀಟ್ ಮೂಲಕ ರಾಜ್ಯ ಸರ್ಕಾರವನ್ನು ಎಚ್ಚರಿಸಿದ್ದಾರೆ.
ವಿಜಯೇಂದ್ರ ಅವರ ಟ್ವಿಟ್ಟರ್ ಖಾತೆಯಲ್ಲಿ,”ಗ್ಯಾರಂಟಿ ಕಸರತ್ತಿನಲ್ಲಿ ಕಳೆದು ಹೋಗಿರುವ ಕಾಂಗ್ರೆಸ್ ಸರ್ಕಾರಕ್ಕೆ ಶುಭ ಶಕುನವೇಕೋ ‘ಕೈ’ ಹಿಡಿದಂತಿಲ್ಲ, ವರುಣನ ಅವಕೃಪೆ ಇಡೀ ರಾಜ್ಯವನ್ನಾವರಿಸಿದೆ, ಬರಗಾಲ ತನ್ನ ಕೆನ್ನಾಲಿಗೆ ಚಾಚಲು ಆರಂಭಿಸಿದೆ, ನೀರಿಲ್ಲದೆ ತತ್ತರದಿಂದ ಮಹಿಳೆಯರು ಆಕ್ರೋಶಿತರಾಗಿದ್ದಾರೆ.
ಮುಂಜಾಗ್ರತೆ ವಹಿಸದಿದ್ದರೆ, ಉದ್ಭವಿಸುವ ಭೀಕರತೆಗೆ ಸರ್ಕಾರವೇ ಹೊಣೆಯಾಗಲಿದೆ” ಎಂದು ಟ್ವೀಟ್ ಮಾಡಿದ್ದಾರೆ.
ಈ ಮೂಲಕ ಅವರು ರಾಜ್ಯ ಸರ್ಕಾರವನ್ನು ಎಚ್ಚರಿಸಿದ್ದಾರೆ. ಅಂದಹಾಗೆ ರಾಜ್ಯದಲ್ಲಿ ಜೂನ್ ವೇಳೆಗೆ ವಾಡಿಕೆಗಿಂತ ಕಡಿಮೆ ಪ್ರಮಾಣದಲ್ಲಿ ಮಳೆ ಬಂದಿದೆ. ಹೀಗಾಗಿ ಮುಂದೆ ಎದುರಾಗುವ ಸಮಸ್ಯೆಗಳತ್ತ ಗಮನ ಕೊಡಲಿ ಎಂದು ರಾಜ್ಯ ಸರ್ಕಾರಕ್ಕೆ ಕಿವಿ ಮಾತು ಹೇಳಿದ್ದಾರೆ.