ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಪದಗ್ರಹಣ, ಅಧಿಕಾರ ಹಸ್ತಾಂತರಿಸಿದ ಕಟೀಲ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅಧಿಕಾರ ಸ್ವೀಕರಿಸಿದರು. ಮಲ್ಲೇಶ್ವರದ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ನಳಿನ್‌ ಕುಮಾರ್‌ ಕಟೀಲ್‌ ಅಧಿಕಾರ ಹಸ್ತಾಂತರ ಮಾಡಿದರು. ವಿಜಯೇಂದ್ರ ಅವರನ್ನು ರಾಜ್ಯಾಧ್ಯಕರ ಕುರ್ಚಿ ಮೇಲೆ ಕುಳ್ಳಿರಿಸಿ, ಶಾಲು ಹೊದಿಸಿ, ಬಿಜೆಪಿ ಬಾವುಟ ನೀಡಿ ಅಧಿಕಾರ ಹಸ್ತಾಂತರ ಮಾಡಲಾಯಿತು.

ಈ ಸಂದರ್ಭದಲ್ಲಿ ಯಡಿಯೂರಪ್ಪ, ಮಾಜಿ ಸಚಿವರಾದ ಗೋವಿಂದ ಕಾರಜೋಳ, ಮುನಿರತ್ನ, ಅಶೋಕ್​, ಆರಗ ಜ್ಞಾನೇಂದ್ರ, ಶ್ರೀರಾಮುಲು, ಗೋಪಾಲಯ್ಯ, ಪ್ರಭು ಚೌಹಾಣ್​, ಸಂಸದರಾದ ರಾಘವೇಂದ್ರ, ತೇಜಸ್ವಿ ಸೂರ್ಯ ಸೇರಿದಂತೆ ಹಲವು ಶಾಸಕರು, ನಾಯಕರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಜಯಘೋಷಣೆಗಳ ಮೂಲಕ ಬಿಜೆಪಿಯ 11ನೇ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಅಧಿಕಾರ ವಹಿಸಿಕೊಂಡರು. ನಂತರ ಕಚೇರಿಯಲ್ಲಿದ್ದ ಹಿರಿಯರ ಕಾಲಿಗೆ ಎರಗಿ ವಿಜಯೇಂದ್ರ ಆಶೀರ್ವಾದ ಪಡೆದ ಬಳಿಕ ನೆರೆದಿದ್ದ ನಾಯಕರು ಪರಸ್ಪರ ಸಿಹಿ ತಿನ್ನಿಸಿ ಸಂಭ್ರಮಾಚರಣೆಯಲ್ಲಿ ತೊಡಗಿದರು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!