ಮಂತ್ರಾಲಯ ಗುರುರಾಘವೇಂದ್ರ ದರುಶನ ಪಡೆದ ಬಿ.ವೈ.ವಿಜಯೇಂದ್ರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಗುರುರಾಘವೇಂದ್ರ ಸ್ವಾಮಿ ಮಠದ ಮಂತ್ರಾಲಯಕ್ಕೆ ಭೇಟಿ ನೀಡಿ ಗುರುರಾಯರ ದರ್ಶನ ಪಡೆದರು. ರಾಜ್ಯ ಬಿಜೆಪಿ ಅಧ್ಯಕ್ಷರಾದ ಬಳಿಕ ಪ್ರಥಮ ಬಾರಿಗೆ ಮಂತ್ರಾಲಯಕ್ಕೆ ಭೇಟಿ ನೀಡಿದರು.

ಲೋಕಸಭಾ ಚುನಾವಣೆಗೆ ಪೂರ್ವ ತಯಾರಿಯಾಗಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿರುವ ವಿಜಯೇಂದ್ರ ಗುರುರಾಘವೇಂದ್ರ ಸ್ವಾಮಿಗಳು ವೃಂದಾವನದಲ್ಲಿರುವ ಮಂಚಾಲಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರು ಆಶೀರ್ವಾದ ಪಡೆದರು.

ಶ್ರೀಗಳಿಗೆ ಫಲ ಮಂತ್ರಾಕ್ಷತೆ ನೀಡಿ ಶೇಷವಸ್ತ್ರದ ಸ್ಮರಣಿಕೆ ನೀಡಿ ಆಶೀರ್ವದಿಸಿದರು. ಮಂತ್ರಾಲಯದಲ್ಲಿ ರಾಯರ ದರ್ಶನ ಪಡೆದ ನಂತರ ವಿಜಯೇಂದ್ರ ರಾಯಚೂರಿನಿಂದ ಜಿಲ್ಲಾ ಪ್ರವಾಸ ಆರಂಭಿಸಲಿದ್ದಾರೆ. ಇಂದಿನಿಂದ ಎರಡು ದಿನದೊಳಗೆ ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳಿಗೆ ವಿಜಯೇಂದ್ರ ಭೇಟಿ ನೀಡಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!