ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆ ಆಗಿರುವ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ಪುತ್ರ ಬಿ.ವೈ ವಿಜಯೇಂದ್ರ ಅವರು ಇಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ಭೇಟಿಯಾಗಿ ಆಶೀರ್ವಾದ ಪಡೆಯಲಿದ್ದಾರೆ.
ಇಂದು ಬಿ.ವೈ.ವಿಜಯೇಂದ್ರ ಅವರು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ನಿವಾಸಕ್ಕೆ ತೆರಳಲಿದ್ದಾರೆ. ಅಲ್ಲಿ ದೇವೇಗೌಡ ಅವರ ಜೊತೆ ಮಾತುಕತೆ ನಡೆಸಿ ಆಶೀರ್ವಾದ ಪಡೆಯಲಿದ್ದಾರೆ.
ಬಳಿಕ ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ.ಕೃಷ್ಣ ಮತ್ತು ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆಯಲಿದ್ದಾರೆ.