ದೇಶದ 10 ರಾಜ್ಯಗಳಲ್ಲಿ ʻBA.2.75ʼ ಪತ್ತೆ: ಶಾಕಿಂಗ್ ನ್ಯೂಸ್ ಕೊಟ್ಟಿದೆ WHO

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ದೇಶದ 10 ರಾಜ್ಯಗಳಲ್ಲಿ ಕೋವಿಡ್-19 ನ ಓಮಿಕ್ರಾನ್ ರೂಪಾಂತ ಹೊಸ ಉಪ-ವ್ಯತ್ಯಯ ʻBA.2.75ʼ ಪತ್ತೆಯಾಗಿದೆ. ಈ ಅಘಾತಕಾರಿ ಮಾಹಿತಿಯನ್ನು ಖುದ್ದು ವಿಶ್ವ ಆರೋಗ್ಯ ಸಂಸ್ಥೆ ಬಹಿರಂಗಪಡಿಸಿದೆ.

ವಿಶ್ವ ಆರೋಗ್ಯ ಸಂಸ್ಥೆಯ ಮಹಾನಿರ್ದೇಶಕ ಟೆಡ್ರೊಸ್ ಅಧಾನಮ್ ಘೆಬ್ರೆಯೆಸಸ್, BA.4 ಮತ್ತು BA.5 ಯುರೋಪ್, ಅಮೆರಿಕಾದಲ್ಲಿ ಕಂಡು ಬಂದಿವೆ. ಭಾರತದಲ್ಲಿ BA.2.75 ನ ಹೊಸ ಉಪ-ವಂಶಾವಳಿಯನ್ನು ದೃಢಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಭಾರತದ ಸುಮಾರು ಹತ್ತು ರಾಜ್ಯಗಳಲ್ಲಿ ಈ ವೈರಸ್ ಪತ್ತೆಯಾಗಿದ್ದು, ಇದೊಂದು ಆತಂಕಕಾರಿ ಬೆಳವಣಿಗೆ ಎಂದಿದ್ದಾರೆ. ಆದರೆ ಇದನ್ನು ಭಾರತೀಯ ಆರೋಗ್ಯ ಸಚಿವಾಲಯ ಅಧಿಕೃತವಾಗಿ ಘೋಷಣೆ ಮಾಡಿಲ್ಲವೆಂದು ತಿಳಿಸಿದ್ದಾರೆ.

ಜಾಗತಿಕವಾಗಿ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಕಳೆದ ಎರಡು ವಾರಗಳ ಅವಧಿಯಲ್ಲೇ ಸುಮಾರು 30 ಪ್ರತಿಶತದಷ್ಟು ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!