ಅಂಬೇಡ್ಕರ್‌ 131ನೇ ಜಯಂತೋತ್ಸವಕ್ಕೆ ಬೀದರ್‌ ಜಿಲ್ಲಾಡಳಿತ ತಯಾರಿ

ಹೊಸದಿಗಂತ ವರದಿ ಬೀದರ್:‌

ಏಪ್ರಿಲ್‌ 14 ರಂದು ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 131ನೇ ಜಯಂತ್ಯೋತ್ಸವ. ಈ ಹಿನ್ನೆಲೆಯಲ್ಲಿ ಬೀದರ್‌ನ ಜಿಲ್ಲಾಡಳಿತ, ನಗರಸಭೆ, ಕನ್ನಡ ಮತ್ತು ಸಂಸ್ಕತಿ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಾಳೆ ಸಂಜೆ 6 ಗಂಟೆಗೆ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಸಾರ್ವಜನಿಕ ಕಾರ್ಯಕ್ರಮ ಆಯೋಜಿಸಲಾಗಿದೆ. ಕಾರ್ಯಕ್ರಮವನ್ನು ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಬಿ.ಪಾಟೀಲ ಮುನೇನಕೊಪ್ಪ ಅವರು ಉದ್ಘಾಟನೆ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಸಚಿವರಾದ ಭಗವಂತ ಖೂಬಾ, ಪ್ರಭು ಬಿ.ಚವ್ಹಾಣ, ಶಾಸಕ ರಹೀಮ್ ಖಾನ್ ಅಧ್ಯಕ್ಷತೆ ವಹಿಸಲಿದ್ದಾರೆ.

ಬೆಳಿಗ್ಗೆ 8.30ಕ್ಕೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಹಾಗೂ ಮಾಲಾರ್ಪಣೆ ನಡೆಯಲಿದೆ. ನಂತರ ಬೆಳಿಗ್ಗೆ 9 ಗಂಟೆಗೆ ಭಗತಸಿಂಗ್ ಚೌಕ್, ಬಸವೇಶ್ವರ ಚೌಕ್, ನಯಾ ಕಮಾನ, ಚೌಬಾರ್, ಗವಾನ ಚೌಕ್, ಮುಖ್ಯ ರಸ್ತೆಯಿಂದ ಬಿ.ಶಾಮಸುಂದರ ಚೌಕ್ ಮೂಲಕ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದವರೆಗೆ ಮೆರವಣಿಗೆ ನಡೆಯಲಿದೆ. ಮೆರವಣಿಗೆ ಬಳಿಕ ಸಂಜೆ 6 ಗಂಟೆಗೆ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಸಾರ್ವಜನಿಕ ಕಾರ್ಯಕ್ರಮ ನಡೆಯಲಿದೆ.

ಮದ್ಯದಂಗಡಿ ಮುಚ್ಚಲು ಡಿಸಿ ಆದೇಶ

ಡಾ.ಬಿ.ಆರ್.ಅಂಬೇಡ್ಕರ ಜಯಂತಿ ಆಚರಣೆ ಹಿನ್ನೆಲೆ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಏಪ್ರಿಲ್ 14 ರ ಬೆಳಿಗ್ಗೆ 6 ಗಂಟೆಯಿಂದ ಏಪ್ರಿಲ್ 15 ರ ಬೆಳಿಗ್ಗೆ 6 ಗಂಟೆಯವರೆಗೆ ಬೀದರ ನಗರ ಪ್ರದೇಶದ ವ್ಯಾಪ್ತಿಯಲ್ಲಿ ಎಲ್ಲಾ ಮದ್ಯದಂಗಡಿಗಳನ್ನು ಮುಚ್ಚುವಂತೆ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!