ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಬಾ ಸಿದ್ದಿಕಿ ಹತ್ಯೆ ಪ್ರಕರಣದಲ್ಲಿ ಮುಂಬೈ ಪೊಲೀಸರು ಸ್ಕ್ರ್ಯಾಪ್ ಡೀಲರ್ ಒಬ್ಬನನ್ನು ಬಂಧಿಸಿದ್ದಾರೆ. ಈ ಮೂಲಕ ಇಲ್ಲಿಯವರೆಗೂ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 10ಕ್ಕೆ ಏರಿಕೆ ಕಂಡಿದೆ.
ಬಂಧಿತ ಆರೋಪಿಯನ್ನು ರಾಜಸ್ಥಾನದ ಉದಯಪುರ ಮೂಲದ ಭಗವತ್ ಓಂ ಸಿಂಗ್ (32) ಎಂದು ಗುರುತಿಸಲಾಗಿದೆ. ಆತ ಈಗ ಮುಂಬೈನಲ್ಲಿ ನೆಲೆಸಿದ್ದ. ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಅ.26 ರವರೆಗೆ ಆತನನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.