Monday, March 27, 2023

Latest Posts

2021ರ ಐಸಿಸಿ ಏಕದಿನ ಕ್ರಿಕೆಟಿಗನಾಗಿ ಪಾಕ್‌ ನ ಬಾಬರ್‌ ಅಜಮ್‌ ಆಯ್ಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಪಾಕಿಸ್ತಾನ ಕ್ರಿಕೆಟ್‌ ತಂಡದ ನಾಯಕ ಬಾಬರ್‌ ಅಜಮ್‌ 2021ರ ಐಸಿಸಿ ವರ್ಷದ ಏಕದಿನ ಕ್ರಿಕೆಟಿಗನಾಗಿ ಆಯ್ಕೆಯಾಗಿದ್ದಾರೆ.
ಬಾಬರ್‌ ಅಜಮ್‌ (27) ದಕ್ಷಿಣ ಆಫ್ರಿಕಾ ವಿರುದ್ಧ 2-1 ಸರಣಿಯ ಗೆಲುವಲ್ಲಿ 228 ರನ್‌ ಗಳಿಸುವ ಮೂಲಕ ಎರಡನೇ ಅತಿ ಹೆಚ್ಚು ರನ್‌ ಗಳಿಸಿದ ಆಟಗಾರರಾಗಿದ್ದು, ಆಡಿದ 6 ಪಂದ್ಯಗಳಲ್ಲಿ 67.50 ಸರಾಸರಿಯಲ್ಲಿ 405 ರನ್‌ ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇನ್ನುಳಿದಂತೆ ಪಕಿಸ್ತಾನದ ಮೊದಲ ಏಕದಿನ ಪಂದ್ಯದಲ್ಲಿ ಬಾಬರ್‌ ಶತಕ ಸಿಡಿಸಿದ್ದರು. ಕೊನೆಯ ಏಕದಿನ ಪಂದ್ಯದಲ್ಲಿ 82 ಬಾಲ್‌ ಗಳಲ್ಲಿ 94 ರನ್‌ ಗಳ ಭರ್ಜರಿ ಪ್ರದರ್ಶನ ನೀಡಿದ್ದರು.
ವರ್ಷದ ಏಕದಿನ ಕ್ರಿಕೆಟಿಗ ಪ್ರಶಸ್ತಿಗೆ ಬಾಂಗ್ಲಾದೇಶದ ಶಕೀಬ್ ಅಲ್ ಹಸನ್, ದಕ್ಷಿಣ ಆಫ್ರಿಕಾದ ಜನ್ನೆಮನ್ ಮಲಾನ್ ಮತ್ತು ಐರ್ಲೆಂಡ್‌ನ ಪಾಲ್ ಸ್ಟಿರ್ಲಿಂಗ್ ಕೂಡ ನಾಮನಿರ್ದೇಶನಗೊಂಡಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!