ಹೊಸದಿಗಂತ ಡಿಜಿಟಲ್ ಡೆಸ್ಕ್
“ಮಸೀದಿಗಳಿಂದ ಕಲ್ಲು ತೂರಾಟ ನಡೆದರೆ ಅವುಗಳನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಮತ್ತು ಅದಕ್ಕೆ ಕಾರಣರಾದ ಮುಲ್ಲಾಗಳನ್ನು ತಕ್ಷಣ ಬಂಧಿಸಬೇಕು,” ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಬೃಹತ್ ಹಿಂದೂ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ತುಷ್ಟೀಕರಣ ರಾಜಕಾರಣದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. “ಒಂದು ವೇಳೆ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲು ವಿಫಲವಾದರೆ, ಅಯೋಧ್ಯೆಯಲ್ಲಿ ಬಾಬರಿ ಮಸೀದಿ ಧ್ವಂಸವಾದ ಮಾದರಿಯಲ್ಲೇ ಕರ್ನಾಟಕದ ಹಲವು ಮಸೀದಿಗಳಿಗೂ ಅದೇ ಪರಿಸ್ಥಿತಿ ಎದುರಾಗಬಹುದು,” ಎಂದು ಮಾರ್ಮಿಕವಾಗಿ ಎಚ್ಚರಿಸಿದರು.
ಇದೇ ವೇಳೆ ಕಾಂಗ್ರೆಸ್ ಆಡಳಿತದಲ್ಲಿ ಹಿಂದೂಗಳ ರಕ್ಷಣೆ ಕಷ್ಟಸಾಧ್ಯವಾಗುತ್ತಿದೆ ಎಂದು ಆರೋಪಿಸಿದ ಅವರು, ಪ್ರಚೋದನಾಕಾರಿ ಕೃತ್ಯಗಳಿಗೆ ಕಡಿವಾಣ ಹಾಕದಿದ್ದರೆ ಭವಿಷ್ಯದಲ್ಲಿ ಉಂಟಾಗುವ ಪರಿಣಾಮಗಳಿಗೆ ಸರ್ಕಾರವೇ ಹೊಣೆಯಾಗಲಿದೆ ಎಂದು ಗುಡುಗಿದರು.



