ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್ ಬೆಡಗಿ ದೀಪಿಕಾ ಪಡುಕೋಣೆ ಮತ್ತು ರಣ್‌ವೀರ್ ಸಿಂಗ್ ದಂಪತಿ ಚೊಚ್ಚಲ ಮಗುವಿನ ಆಗಮನಕ್ಕಾಗಿ ಎದುರು ನೋಡುತ್ತಿದ್ದಾರೆ. ಪ್ರೆಗ್ನೆನ್ಸಿ ಫೋಟೋಶೂಟ್ ಶೇರ್ ಮಾಡಿ ಸುದ್ದಿಯಲ್ಲಿರುವ ದೀಪಿಕಾ ಪಡುಕೋಣೆ ಇದೀಗ ಡೆಲಿವೆರಿ ಬಗ್ಗೆ ಅಪ್‌ಡೇಟ್‌ವೊಂದು ಸಿಕ್ಕಿದೆ. ಸೆ.28ರಂದು ನಟಿ ಚೊಚ್ಚಲ ಮಗುವನ್ನು ಬರಮಾಡಿಕೊಳ್ಳಲಿದ್ದಾರೆ.
ನಟಿ ದೀಪಿಕಾ ಈಗ ತುಂಬು ಗರ್ಭಿಣಿಯಾಗಿದ್ದು, ಮನೆಗೆ ಹೊಸ ಅತಿಥಿ ಆಗಮನವಾಗುತ್ತಿರುವ ಖುಷಿಯಲ್ಲಿದ್ದಾರೆ. ಸೆಪ್ಟೆಂಬರ್ 28ರಂದು ದೀಪಿಕಾಗೆ ಡಾಕ್ಟರ್ ಡೆಲಿವೆರಿ ಡೇಟ್ ಕೊಟ್ಟಿದ್ದಾರೆ. ಮುಂಬೈನ ಖಾಸಗಿ ಆಸ್ಪತ್ರೆಯೊಂದರಲ್ಲಿ ದೀಪಿಕಾ ಮಗುವಿಗೆ ಜನ್ಮನೀಡಲಿದ್ದಾರೆ.