ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಹಾರ ಅರಸಿ ಬಂದ ಆನೆಮರಿಯೊಂದು ವಿದ್ಯುತ್ ಶಾಕ್ಗೆ ಪ್ರಾಣ ಕಳೆದುಕೊಂಡ ಘಟನೆ ಗುಂಡ್ಲುಪೇಟೆ ತಾಲೂಕಿನ ಮಂಗಲ ಗ್ರಾಮದ ಕಾಡಂಚಿನಲ್ಲಿ ನಡೆದಿದೆ. ಷರೀಪ್ ಖಾನ್ ಎಂಬವರ ಜಮೀನಿನಲ್ಲಿ ಅಕ್ರಮವಾಗಿ ಹರಿಸಿದ್ದ ವಿದ್ಯುತ್ ತಂತಿಯಿಂದ ಈ ಅವಘಡ ಸಂಭವಿಸಿದೆ. ಮೃತಪಟ್ಟ ಗಂಡು ಆನೆ ಮರಿಗೆ 1ರಿಂದ 2 ವರ್ಷ ಪ್ರಾಯ ಇರಬಹುದು ಎಂದು ಅಂದಾಜಿಸಲಾಗಿದೆ.
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದುಕೆರೆ ವಲಯ ವ್ಯಾಪ್ತಿಯ ಮಂಗಲ ಗ್ರಾಮದ
ಹುಲಿಯಮ್ಮನ ಗುಡಿಗೆ ಹೋಗುವ ದಾರಿಯಲ್ಲಿ ಷರೀಪ್ ಎಂಬವರು ತಮ್ಮ ಜಮೀನಿನಲ್ಲಿ ರಾಗಿ ಬೆಳೆದಿದ್ದು, ಬೆಳೆ ರಕ್ಷಣೆಗಾಗಿ ಅಕ್ರಮವಾಗಿ ವಿದ್ಯುತ್ ತಂತಿ ಅಳವಡಿಸಿದ್ದು, ಆನೆ ಮರಿ ವಿದ್ಯುತ್ ಪ್ರವಹಿಸಿ ಅಸುನೀಗಿದೆ.