ದೆಹಲಿಯಲ್ಲಿ ಮತ್ತೆ ಹೆಚ್ಚಿದ ಕೊರೋನಾ ಪಾಸಿಟಿವ್ : ಶಾಲೆಗಳಿಗೆ ಮಾರ್ಗಸೂಚಿ ಬಿಡುಗಡೆಗೆ ಸರಕಾರ ನಿರ್ಧಾರ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ದೆಹಲಿಯಲ್ಲಿ ಮತ್ತೆ ಕೋವಿಡ್​ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಈ ನಿಟ್ಟಿನಲ್ಲಿ ಶಾಲೆಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಲು ಸರ್ಕಾರ ಮುಂದಾಗಿದೆ. ಈ ಬಗ್ಗೆ ಶಿಕ್ಷಣ ಸಚಿವ, ಉಪ ಮುಖ್ಯಮಂತ್ರಿ ಮನೀಷ್​ ಸಿಸೋಡಿಯಾ ಮಾಹಿತಿ ನೀಡಿದ್ದಾರೆ.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲ ದಿನಗಳಿಂದ ಮಕ್ಕಳು ಸೋಂಕಿಗೆ ಗುರಿಯಾಗುತ್ತಿರುವ ಬಗ್ಗೆ ಪೋಷಕರಿಂದ ಮಾಹಿತಿ ಬಂದಿದೆ. ಈ ನಿಟ್ಟಿನಲ್ಲಿ ಶಾಲೆಗಳಿಗೆ ಮಾತ್ರ ಶುಕ್ರವಾರ ಸಾಮಾನ್ಯ​ ಮಾರ್ಗಸೂಚಿಗಳನ್ನು ಹೊರಡಿಸಲಾಗುವುದು ಎಂದು ಅವರು ಹೇಳಿದರು.
ಕೋವಿಡ್​ ಪ್ರಕರಣಗಳ ಸಂಖ್ಯೆ ಅಲ್ಪ ಮಟ್ಟದಲ್ಲಿ ಹೆಚ್ಚಾಗಿದರೂ, ಆಸ್ಪತ್ರೆಗೆ ದಾಖಲಾಗುವರರ ಸಂಖ್ಯೆ ಕಡಿಮೆ ಇದೆ. ಸೋಂಕಿನ ಬಗ್ಗೆ ಗಾಬರಿಪಡಬೇಕಿಲ್ಲ , ಸ್ವಲ್ವ ಎಚ್ಚರ ವಹಿಸಬೇಕು ಎಂದು ಮನೀಷ್​ ಸಿಸೋಡಿಯಾ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here