Monday, August 8, 2022

Latest Posts

ರಾಜ್ಯದಲ್ಲಿ ಮತ್ತೆ ಸಾವಿರ ಗಡಿ ದಾಟಿದ ಕೊರೋನಾ ಸೋಂಕಿತರ ಪ್ರಮಾಣ: ಇಂದು 1,135 ಮಂದಿಗೆ ಪಾಸಿಟಿವ್ ದೃಢ

ಹೊಸದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದಲ್ಲಿ ಕೊರೋನಾ ಮತ್ತೆ ಹೆಚ್ಚುತ್ತಿದ್ದು, ಮಂಗಳವಾರ 1,135 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,62,339ಕ್ಕೆ ಏರಿಕೆಯಾಗಿದೆ.
ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಆರು ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,403ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ರಾಜ್ಯದಲ್ಲಿ ಇಂದು 561 ಸೋಂಕಿತರು ಗುಣಮುಖರಾಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,40,489ಕ್ಕೆ ಏರಿಕೆಯಾಗಿದೆ. ಇನ್ನು 9,428 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 129 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss