ಬೆನ್ನು ನೋವಿನ ಶಸ್ತ್ರಚಿಕಿತ್ಸೆ: ನ್ಯೂಜಿಲ್ಯಾಂಡ್​ ತಲುಪಿದ ಜಸ್​ಪ್ರೀತ್​ ಬುಮ್ರಾ!

ಹೊಸದಿಗಂತ ಡಿಜಿಟಲ್ ಡೆಸ್ಕ್ :

ಬೆನ್ನು ನೋವಿನ ಶಸ್ತ್ರಚಿಕಿತ್ಸೆಗಾಗಿ ಟೀಮ್ ಇಂಡಿಯಾದ ಸ್ಟಾರ್ ವೇಗಿ ಜಸ್​ಪ್ರೀತ್​ ಬುಮ್ರಾ(Jasprit Bumrah) ಅವರು ನ್ಯೂಜಿಲ್ಯಾಂಡ್​ ತಲುಪಿದ್ದಾರೆ.

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮತ್ತು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್‌ಸಿಎ) ಆಡಳಿತ ಮಂಡಳಿಯ ವೈದ್ಯಕೀಯ ತಂಡವೂ ನ್ಯೂಜಿಲ್ಯಾಂಡ್​ನ ತಜ್ಞ ವೈದ್ಯ ರೋವನ್​ ಶೌಟೆನ್​ ಅವರೊಂದಿಗೆ ಬುಮ್ರಾ ಶಸ್ತ್ರಚಿಕಿತ್ಸೆ ಕುರಿತು ಈಗಾಗಲೇ ಮಾತುಕತೆ ನಡೆಸಿದೆ. ಬುಮ್ರಾ ಮುಂದಿನ 2 ದಿನಗಳ ಓಳಗಡೆ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂದು ತಿಳಿದುಬಂದಿದೆ.

ಇನ್ನು ಬುಮ್ರಾ ಸುಮಾರು 5 ತಿಂಗಳಿಂದ ಮೈದಾನದಿಂದ ದೂರ ಉಳಿಯುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಟಿ20ಯಲ್ಲಿ ಕೊನೆಯ ಬಾರಿಗೆ ಭಾರತ ಪರ ಆಡಿದ ಬುಮ್ರಾ ಇದಾದ ಬಳಿಕ ಬೆನ್ನುನೋವಿನಿಂದಾಗಿ ಏಷ್ಯಾಕಪ್ ಮತ್ತು ಟಿ20 ವಿಶ್ವಕಪ್‌ನಿಂದ ಹೊರಗುಳಿದಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!