ಮತ್ತೆ ಅಧಿಕಾರಕ್ಕೆ ಬರುವ ಭ್ರಮೆಯಲ್ಲಿ ಕಾಂಗ್ರೆಸ್ ನಾಯಕರು: ಶಾಸಕ ಜಗದೀಶ ಶೆಟ್ಟರ

ಹೊಸ ದಿಗಂತ ವರದಿ, ಹುಬ್ಬಳ್ಳಿ:

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ ನಡುವೆ ಸಿಎಂ ಸ್ಥಾನಕ್ಕೆ ಕಿತ್ತಾಟ ನಡೆಯುತ್ತಿದೆ. ಬಹುಶಃ ಅವರು ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂಬ ಭ್ರಮೆಯಲ್ಲಿದ್ದಾರೆ ಎಂದು ಶಾಸಕ ಜಗದೀಶ ಶೆಟ್ಟರ ಹೇಳಿದರು.
ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆದರೆ ಅವರ ಪಕ್ಷ ದೇಶ ಮತ್ತು ರಾಜ್ಯದಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿದೆ ಎಂದು ಮರೆತಿದ್ದಾರೆ. ಬಿಜೆಪಿಯವರು ಕಾಂಗ್ರೆಸ್‌ಗೆ ಯಾರು ಹೋಗಲ್ಲ. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ ಹುಳು ಬಿಡುವ ಕೆಲಸಮಾಡುತ್ತಿದ್ದಾರೆ. ಸುಳ್ಳು ಸುದ್ದಿ ಹಬ್ಬಿಸುವ ಮೂಲಕ ಇರುವ ಮರೆಯಾದೆಯನ್ನು ಕಳೆದುಕೊಳ್ಳುತ್ತಿದ್ದಾರೆ ಎಂದರು.
ಚುನಾವಣೆ ಸಮೀಪಿಸುತ್ತಿದ್ದು, ಮೇಕೆದಾಟು, ಮಹದಾಯಿ ಎಂಬ ಯೋಜನೆಗಳನ್ನು ಇಟ್ಟುಕೊಂಡು ಪಾದಯಾತ್ರೆ ಮತ್ತೊಂದು ಎಂದು ಜನಸಾಮಾನ್ಯರ ಹಾದಿ ತಪ್ಪಿಸುತ್ತಿದ್ದಾರೆ. ಈ ಬಗ್ಗೆ ಅಷ್ಟು ಕಾಳಜಿ ಇರುವವರು ತಮ್ಮ ಪಕ್ಷ ಅಧಿಕಾರದಲ್ಲಿ ಇದ್ದಾಗ ಯಾಕೆ ಜಾರಿಗೆ ತರಲಿಲ್ಲ ಇದರ ಅರ್ಥ ಚುನಾವಣೆ ಗಿಮಿಕ ಮಾಡುತ್ತಿದ್ದಾರೆ ಎಂದು ಹೇಳಿದರು.
ಮೇಯರ್ ಮತ್ತು ಉಪಮೇಯೆರ್ ಮೀಸಲಾತಿ ಬುಧವಾರ ಬಂದಿದೆ. ಇನ್ನೂ ಚುನವಣೆ ದಿನಾಂಕ ಬೆಳಗಾವಿ ಆಯುಕ್ತರು ಘೋಷಿಸದ ನಂತರ ಮೇಯರ್ ಮತ್ತು ಉಪಮೇಯರ್ ಯಾರಾಗುತ್ತಾರೆ ಎಂದು ತಿಳಿಯುತ್ತೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!