ಹೊಸದಿಗಂತ ಡಿಜಿಟಲ್ ಡೆಸ್ಕ್:
ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿ ಸುದ್ದಿ . ಕೊನೆಗೂ ಟೀಮ್ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ತಂಡಕ್ಕೆ ಮರಳಿದ್ದು, ಐರ್ಲೆಂಡ್ ಪ್ರವಾಸಕ್ಕೆ ನಾಯಕನಾಗಿ ನೇಮಕಗೊಂಡಿದ್ದಾರೆ.
ಐರ್ಲೆಂಡ್‌ನಲ್ಲಿ ಆಗಸ್ಟ್ 18 ರಿಂದ ಪ್ರಾರಂಭವಾಗುವ ಮೂರು T20I ಸರಣಿಯಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ.
ಇನ್ನು ಉಪನಾಯಕನಾಗಿ ರುತುರಾಜ್ ಗಾಯಕ್ವಾಡ್ ಆಯ್ಕೆಯಾಗಿದ್ದಾರೆ. ಹಾಗೆಯೇ ತಂಡದಲ್ಲಿ ವಿಕೆಟ್ ಕೀಪರ್ ಗಳಾಗಿ ಸಂಜು ಸ್ಯಾಮ್ಸನ್ ಹಾಗೂ ಜಿತೇಶ್ ಶರ್ಮಾ ಕಾಣಿಸಿಕೊಂಡಿದ್ದಾರೆ.ಕನ್ನಡಿಗ ಪ್ರಸಿಧ್ ಕೃಷ್ಣ ಕೂಡ ಮತ್ತೆ ಬ್ಲೂ ಜೆರ್ಸಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಸರಣಿ ವೇಳಾಪಟ್ಟಿ:
1 ನೇ T20I: ಆಗಸ್ಟ್ 18, ಮಲಾಹಿಡೆ
2 ನೇ T2oI: ಆಗಸ್ಟ್ 20, ಮಲಾಹೈಡ್
3ನೇ T20I: ಆಗಸ್ಟ್ 23, ಮಲಾಹಿಡೆ
ಭಾರತ ತಂಡ:
ಜಸ್ಪ್ರೀತ್ ಬುಮ್ರಾ (ನಾಯಕ), ರುತುರಾಜ್ ಗಾಯಕ್ವಾಡ್ (ಉಪ ನಾಯಕ), ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (WK), ಜಿತೇಶ್ ಶರ್ಮಾ (WK), ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಶಹಬಾಜ್ ಅಹ್ಮದ್, ರವಿ ಬಿಷ್ಣೋಯ್, ಪ್ರಸಿದ್ಧ್ ಕೃಷ್ಣ , ಅರ್ಶ್ದೀಪ್ ಸಿಂಗ್, ಮುಖೇಶ್ ಕುಮಾರ್, ಅವೇಶ್ ಖಾನ್.