ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲೆಡೆ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಬೆಂಗಳೂರು ಪೊಲೀಸರು ರೌಡಿಶೀಟರ್ಗಳ ಮನೆಗಳಲ್ಲಿ ಶೋಧ ಕಾರ್ಯ ನಡೆಸಿದ್ದಾರೆ.
ಬೆಂಗಳೂರು ಉತ್ತರ ವಿಭಾಗದ ಪೊಲೀಸರು ರೌಡಿಶೀಟರ್ ಗಳ ಮನೆಗಳ ಮೇಲೆ ದಾಳಿ ನಡೆಸಿದ್ದು, ತನಿಖೆ ಮುಂದುವರಿದಿದೆ.
ರಾಜಗೋಪಾಲನಗರ, ಆರ್ ಎಂಸಿ ಯಾರ್ಡ್, ಪೀಣ್ಯ ಸೇರಿದಂತೆ ಹಲವೆಡೆ ದಾಳಿ ನಡೆದಿದೆ. ತಡರಾತ್ರಿ 50 ಪೊಲೀಸರ ತಂಡ ಬೆಂಗಳೂರಿನ 290 ಕಡೆ ದಾಳಿ ನಡೆಸಿ ಪರಿಶೀಲನೆ ನಡೆಸಿದೆ ಎಂದು ತಿಳಿದು ಬಂದಿದೆ.