Sunday, July 3, 2022

Latest Posts

ಬಕ್ರೀದ್‌ ಹಿನ್ನೆಲೆ ನಿರ್ಬಂಧ ಸಡಿಲಿಕೆ: ಕೇರಳದ ನಿರ್ಧಾರ ಸರಿಯಲ್ಲ ಎಂದ ಸುಪ್ರೀಂಕೋರ್ಟ್‌!

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕೇರಳದಲ್ಲಿ ಕೋವಿಡ್‌ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಈ ವೇಳೆ ಬಕ್ರೀದ್‌ ಹಿನ್ನೆಲೆಯಲ್ಲಿ ನಿರ್ಬಂಧಗಳನ್ನು ಸಡಿಲಿಸಲು ಅನುಮತಿ ನೀಡಿರುವ ರಾಜ್ಯ ಸರ್ಕಾರದ ಕ್ರಮ ಸರಿಯಲ್ಲ ಎಂದು ಸುಪ್ರೀಂಕೋರ್ಟ್‌ ಮಂಗಳವಾರ ಹೇಳಿದೆ.
ನಿರ್ಬಂಧಗಳ ಸಡಿಲಿಕೆಯಿಂದಾಗಿ ಕೊರೋನಾ ಸೋಂಕು ಮತ್ತಷ್ಟು ವ್ಯಾಪಕವಾಗುವುದು ಕಂಡುಬಂದಲ್ಲಿ ಕಠಿಣ ಕ್ರಮ ಕೈಗೊಳ್ಳುವುದಾಗಿಯೂ ಸುಪ್ರೀಂಕೋರ್ಟ್‌ ಎಚ್ಚರಿಸಿದೆ.
ಈ ಕುರಿತ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಆರ್‌.ಎಫ್‌.ನರೀಮನ್‌ ಹಾಗೂ ಬಿ.ಆರ್.ಗವಾಯಿ ಅವರಿರುವ ನ್ಯಾಯಪೀಠ, ‘ಕೇರಳ ಸರ್ಕಾರದ ರೀತಿಯಲ್ಲೇ ನಿರ್ಬಂಧಗಳ ಸಡಿಲಿಕೆಗೆ ಅನುಮತಿ ನೀಡುವ ಮೂಲಕ ದೇಶದ ಜನತೆಯನ್ನು ಕೋವಿಡ್‌ ಸಂಕಷ್ಟಕ್ಕೆ ದೂಡಿದಂತಾಗುತ್ತಿದೆ’ ಎಂದು ಕಳವಳ ವ್ಯಕ್ತಪಡಿಸಿತು.
‘ಸಂವಿಧಾನದ 21ನೇ ವಿಧಿ ಎಲ್ಲರಿಗೂ ಬದುಕುವ ಹಕ್ಕನ್ನು ನೀಡಿದೆ. ಕೇರಳ ಸರ್ಕಾರ ಇದನ್ನು ಗಮನದಲ್ಲಿಟ್ಟುಕೊಳ್ಳಬೇಕು’ ಎಂದೂ ನ್ಯಾಯಪೀಠ ನಿರ್ದೇಶನ ನೀಡಿತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss