August 24, 2026
Monday, August 24, 2026
spot_img

ಚೆನ್ನಮ್ಮ ಅಂತ್ಯಕ್ರಿಯೆ ಹಿನ್ನೆಲೆ: ಜು.20ರಂದು ಹೊಳೆನರಸೀಪುರದ ಶಾಲೆ-ಕಾಲೇಜುಗಳಿಗೆ ರಜೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ಅಂತ್ಯಕ್ರಿಯೆ ಸೋಮವಾರ ಹರದನಹಳ್ಳಿ ಸಮೀಪದ ಕ್ಯಾತನಹಳ್ಳಿಯಲ್ಲಿ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಹೊಳೆನರಸೀಪುರ ತಾಲೂಕಿನ ಎಲ್ಲಾ ಶಾಲೆಗಳು, ಕಾಲೇಜುಗಳು ಹಾಗೂ ಅಂಗನವಾಡಿಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.

ರಜೆ ಘೋಷಣೆಗೆ ಕಾರಣ

ಅಂತಿಮ ಯಾತ್ರೆಯಲ್ಲಿ ಗಣ್ಯರು ಹಾಗೂ ಸಾವಿರಾರು ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆಯಿರುವುದರಿಂದ ಸಂಚಾರ ದಟ್ಟಣೆ ಮತ್ತು ಸುರಕ್ಷತೆ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.

ಇದನ್ನೂ ಓದಿ:

ವ್ಯಾಪಾರಸ್ಥರಿಂದ ಸ್ವಯಂ ಬಂದ್

ಚೆನ್ನಮ್ಮ ಅವರಿಗೆ ಗೌರವ ಸಲ್ಲಿಸುವ ಉದ್ದೇಶದಿಂದ ಹೊಳೆನರಸೀಪುರ ಪಟ್ಟಣದ ವ್ಯಾಪಾರಸ್ಥರು ಸ್ವಯಂಪ್ರೇರಿತವಾಗಿ ಅಂಗಡಿಗಳನ್ನು ಮುಚ್ಚಲು ತೀರ್ಮಾನಿಸಿದ್ದಾರೆ.

ಸರ್ಕಾರಿ ಗೌರವದೊಂದಿಗೆ ಅಂತಿಮ ವಿದಾಯ

ಬೆಂಗಳೂರಿನಲ್ಲಿ ಸಾರ್ವಜನಿಕ ದರ್ಶನದ ಬಳಿಕ ಪಾರ್ಥಿವ ಶರೀರವನ್ನು ಹರದನಹಳ್ಳಿಗೆ ಕರೆದೊಯ್ಯಲಾಗಿದ್ದು, ಕ್ಯಾತನಹಳ್ಳಿಯಲ್ಲಿ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ರಾಷ್ಟ್ರೀಯ ನಾಯಕರು ದೇವೇಗೌಡರಿಗೆ ದೂರವಾಣಿ ಮೂಲಕ ಸಂತಾಪ ಸೂಚಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !