ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭಾ ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್ ಭಾರೀ ಹಿನ್ನಡೆಯಾಗಿದ್ದು, ರಾಜಸ್ಥಾನದಲ್ಲಿ ಬರೋಬ್ಬರಿ 400 ಕಾರ್ಯಕರ್ತರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ನಾಗೌರ್ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಲೋಕತಾಂತ್ರಿಕ್ ಪಾರ್ಟಿ ಯೊಂದಿಗೆ ಮೈತ್ರಿ ಮಾಡಿಕೊಂಡಿದೆ. ನಾಗೌರ್ ಸಂಸದ ಮತ್ತು ಆರ್‌ಎಲ್‌ಪಿ ಮುಖ್ಯಸ್ಥ ಹನುಮಾನ್ ಬೇನಿವಾಲ್ ಅವರನ್ನು ಕಾಂಗ್ರೆಸ್ ಇಲ್ಲಿ ಕಣಕ್ಕಿಳಿಸಿದೆ. ಇದು ಕಾಂಗ್ರೆಸ್ ಕಾರ್ಯಕರ್ತರ ಅಸಮಾಧಾನಕ್ಕೆ ಕಾರಣವಾಗಿದೆ. ಹೀಗಾಗಿ ಎಲ್ಲ ಕಾರ್ಯಕರ್ತರು ಒಂದೇ ಬಾರಿಗೆ ಪ್ರಾರ್ಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಬೆನಿವಾಲ್ ನೀಡಿದ ದೂರು ಹಾಗೂ ನಾಗೌರ್‌ನ ಬಿಜೆಪಿ ಅಭ್ಯರ್ಥಿ ಜ್ಯೋತಿ ಮಿರ್ಧಾ ಪರವಾಗಿ ಪ್ರಚಾರ ಮಾಡಿದ ಆರೋಪದ ಮೇಲೆ ಮೂವರು ಕಾಂಗ್ರೆಸ್ ಕಾರ್ಯಕರ್ತರನ್ನು ಆರು ವರ್ಷಗಳ ಕಾಲ ಅಮಾನತುಗೊಳಿಸಲಾಗಿತ್ತು.