ಹೊಸದಿಗಂತ ಡಿಜಿಟಲ್ ಡೆಸ್ಕ್:
ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಬಿಆರ್‌ಎಸ್ ಅಭ್ಯರ್ಥಿಗಳು ಭಾರೀ ಹಿನ್ನಡೆ ಅನುಭವಿಸುತ್ತಿದ್ದಾರೆ.
ತೆಲಂಗಾಣದಲ್ಲಿ ಕಾಂಗ್ರೆಸ್ ಕಮಾಲ್ ಹೆಚ್ಚಾಗಿದ್ದು, 119 ಕ್ಷೇತ್ರಗಳಲ್ಲಿ ಕಾಂಗ್ರೆಸ್ 53 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
ತೆಲಂಗಾಣ ಸಿಂಎಂ ಕೆಸಿಆರ್ ಈ ಬಾರಿ ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿ ಇದ್ದರು. ಆದರೆ ಯಾಕೋ ಲೆಕ್ಕಾಚಾರ ತಲೆಕೆಳಗಾದಂತೆ ಕಾಣಿಸುತ್ತಿದೆ. ಇನ್ನೇನು ಕೆಲವೇ ಸಮಯದಲ್ಲಿ ಮತಎಣಿಕೆ ಸಂಪೂರ್ಣವಾಗಲಿದೆ.