ವಿನಯ್ ಕುಲಕರ್ಣಿ ಗೆ ಮತ್ತೆ ಹಿನ್ನಡೆ: ಧಾರವಾಡ ಪ್ರವೇಶಕ್ಕೆ ಅನುಮತಿ ಕೋರಿದ ಅರ್ಜಿ ವಜಾ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಯೋಗೀಶ್ ಗೌಡ ಕೊಲೆ ಪ್ರಕರಣ (Yogesh Gouda murder case) ದಲ್ಲಿ ಆರೋಪಿಯಾಗಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ (Vinay Kulkarni) ಗೆ ಮತ್ತೆ ಹಿನ್ನಡೆಯಾಗಿದೆ.

ಧಾರವಾಡ ಪ್ರವೇಶಕ್ಕೆ ಅನುಮತಿ ಕೋರಿ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಜಾಗೊಳಿಸಿದೆ.

ಧಾರವಾಡದಲ್ಲಿ ಸ್ಪರ್ಧೆಗೆ ಟಿಕೆಟ್ ಪಡೆಯುವ ಮುನ್ನ ಕೋರ್ಟ್ ಅನುಮತಿ ಪಡೆದಿಲ್ಲ. ಟಿಕೆಟ್ ಪಡೆದ ನಂತರ ಕ್ಷೇತ್ರದ ಭೇಟಿಗೆ ಅನುಮತಿ ನಿರಾಕರಿಸಲಾಗಿದೆ. ಪ್ರಮುಖ ಸಾಕ್ಷಿಗಳ ವಿಚಾರಣೆ ಇನ್ನೂ ಆರಂಭವಾಗಿಲ್ಲ. ಹೀಗಾಗಿ ಧಾರವಾಡ ಭೇಟಿಗೆ ಅನುಮತಿ ನಿರಾಕರಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನ ಜಡ್ಜ್ ಬಿ.ಜಯಂತ್ ಕುಮಾರ್ ಆದೇಶಿಸಿದ್ದಾರೆ.

ಜಾಮೀನು ನೀಡುವಾಗ ಷರತ್ತು ವಿಧಿಸಿದ್ದ ವಿನಯ್ ಕುಲಕರ್ಣಿ ಧಾರವಾಡ ಪ್ರವೇಶಿಸಬಾರದೆಂದು ಸೂಚಿಸಿತ್ತು. ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಸ್ಥಾನದಲ್ಲಿರುವ ವಿನಯ್ ಕುಲಕರ್ಣಿಗೆ ಧಾರವಾಡ ಪ್ರವೇಶ ನಿರಾಕರಿಸಿತ್ತು. ಇದೀಗ ಶಾಸಕನಾಗಿ ಆಯ್ಕೆಯಾಗಿರುವ ಕಾರಣಕ್ಕೆ ಧಾರವಾಡ ಪ್ರವೇಶಿಸಲು ಅನುಮತಿ ನೀಡುವಂತೆ ವಿನಯ್ ಕುಲಕರ್ಣಿ ಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!