ಹೊಸದಿಗಂತ ಡಿಜಿಟಲ್ ಡೆಸ್ಕ್:
ಔತಣಕೂಟ ಮಾಡಿ ಬೆನ್ನಿಗೆ ಚಾಕು ಹಾಕುವುದು ಅಲ್ಲ. ಇದರ ಹಿಂದೆ ಬಿ.ಎಸ್ ಯಡಿಯೂರಪ್ಪ ಅವರ ಕುತಂತ್ರ ಇದ್ದೇ ಇರುತ್ತದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದರು.
ಬೆಳಗಾವಿಯಲ್ಲಿಂದು ಉಭಯ ನಾಯಕರ ಚರ್ಚೆ ವಿಚಾರವಾಗಿ ಮಾತನಾಡಿದ ಯತ್ನಾಳ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮಾಜಿ ಸಿಎಂ ಬಿಎಸ್‌ವೈ ವಿರುದ್ಧ ಮತ್ತೆ ಹರಿಹಾಯ್ಡರು. ವಿಜಯೇಂದ್ರ ಔತಣಕೂಟಕ್ಕೆ ಆಹ್ವಾನಿಸಿದ್ದರು, ನಾನು ಹೋಗಿಲ್ಲ, ರಮೇಶ್ ಜಾರಕಿಹೊಳಿ ಸಹ ಹೋಗಲ್ಲ. ಔತಣಕೂಟಕ್ಕೆ ಕರೆದು, ಬೆನ್ನಿಗೆ ಚಾಕು ಹಾಕುವುದು ಅಲ್ಲ. ನಾವು ಏನಿದ್ದರೂ ಏಕ್ ಮಾರ್ ದೋ ತುಕ್ಡಾ, ಎದುರಿಗೇ ಮಾತನಾಡ್ತೀವಿ ಎಂದು ಹೇಳಿದರು.