Thursday, August 11, 2022

Latest Posts

ತೆರೆಮೇಲೆ ಬರಲಿದೆ ದಾದಾ ಕಹಾನಿ: ಯಾರಾಗಲಿದ್ದಾರೆ ಸೌರವ್ ಗಂಗೂಲಿ ಚಿತ್ರದ ನಾಯಕ?

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ಬಾಲಿವುಡ್​ಗೂ ಕ್ರಿಕೆಟ್​ಗೂ ಅವಿನಾಭಾವ ಸಂಬಂಧ ಸದಾ ಇರುವುದು ಗೊತ್ತಿರುವ ವಿಚಾರ. ಈ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುವಂತೆ ಅನೇಕ ಕ್ರಿಕೆಟ್ ಆಧಾರಿತ ಚಿತ್ರಗಳು ತೆರೆ ಕಂಡಿವೆ.
ಈ ಹಿಂದೆ ಟೀಮ್ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ಜೀವನಾಧಾರಿತ ಚಿತ್ರ. 2016 ರಲ್ಲಿ ‘ಎಂಎಸ್ ಧೋನಿ-ಅನ್​ಟೋಲ್ಡ್ ಸ್ಟೋರಿ’ ಹೆಸರಿನಲ್ಲಿ ಸಿನಿಮಾ ಬಾಕ್ಸಾಫೀಸ್​ನಲ್ಲಿ ಧೂಳೆಬ್ಭಿಸಿತ್ತು. ಇದರ ಬೆನ್ನಲ್ಲೇ ಮತ್ತೋರ್ವ ಟೀಮ್ ಇಂಡಿಯಾ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಅವರ ಫಿಕ್ಸಿಂಗ್ ಕಹಾನಿ ತಿಳಿಸುವ ‘ಅಜರ್’ ನಿಮಾ ತೆರೆಕಂಡರೂ ಗಲ್ಲಾಪೆಟ್ಟಿಯನ್ನು ಅಲುಗಾಡಿಸುವಲ್ಲಿ ವಿಫಲವಾಗಿತ್ತು. ಆ ಬಳಿಕ ಭಜರಂಗಿ ಭಾಯಿಜಾನ್ ನಿರ್ದೇಶಕ ಕಬೀರ್ ಖಾನ್ ಕೈಗೆತ್ತಿಕೊಂಡ ’83’ ಸಿನಿಮಾ ಇನ್ನೇನು ತೆರೆ ಕಾಣಲು ಸಿದ್ಧವಾಗಿದೆ. ಈ ಚಿತ್ರವು 1983ರ ವಿಶ್ವಕಪ್ ಗೆಲುವು ಹಾಗೂ ಕಪಿಲ್ ದೇವ್ ಅವರ ತೆರೆ ಹಿಂದಿನ ಚರಿತ್ರೆಯನ್ನು ತಿಳಿಸಲಿದೆ.
ಇದೀಗ ಬಾಲಿವುಡ್ ಕ್ರಿಕೆಟ್ ಕಹಾನಿಗಳ ಪಟ್ಟಿಗೆ ಹೊಸ ಸೇರ್ಪಡೆ ಸೌರವ್ ಗಂಗೂಲಿ.
ಹೌದು, ಟೀಮ್ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಅವರ ಜೀವನಾಧಾರಿತ ಚಿತ್ರದ ಕುರಿತು ಬಿಗ್ ಅಪ್​ಡೇಟ್ ಹೊರಬಿದ್ದಿದೆ. ಬಾಲಿವುಡ್​ನ ಜನಪ್ರಿಯ ಪ್ರೊಡಕ್ಷನ್ ಹೌಸ್ ಲವ್ ಫಿಲಂಸ್ ಗಂಗೂಲಿ ಜೀವನ ಚರಿತ್ರೆಯನ್ನು ಸಿನಿಮಾ ಮಾಡುವುದಾಗಿ ಘೋಷಿಸಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಲವ್ ಫಿಲಂಸ್, ದಾದಾ ಸೌರವ್ ಗಂಗೂಲಿ ಅವರ ಬಯೋಪಿಕ್ ಚಿತ್ರಕ್ಕೆ ಬಂಡವಾಳ ಹೂಡಲಿದ್ದೇವೆ ಎಂದು ತಿಳಿಸಲು ಥ್ರಿಲ್ ಆಗಿದ್ದೇವೆ. ಈ ಜವಾಬ್ದಾರಿಯನ್ನು ವಹಿಸಿಕೊಂಡಿರುವುದಕ್ಕೆ ನಮಗೆ ಗೌರವವಿದೆ. ಉತ್ತಮ ಇನ್ನಿಂಗ್ಸ್‌ಗಾಗಿ ಎದುರು ನೋಡುತ್ತಿದ್ದೇವೆ ಎಂದು ಬರೆದುಕೊಂಡಿದ್ದಾರೆ. ಇದರ ಹೊರತಾಗಿ ನಿರ್ಮಾಣ ಸಂಸ್ಥೆ ಯಾವುದೇ ಹೆಚ್ಚಿನ ಮಾಹಿತಿ ನೀಡಿಲ್ಲ.
ತಮ್ಮ ಬಯೋಪಿಕ್ ಬಗ್ಗೆ ಪ್ರತಿಕ್ರಿಯಿಸಿರುವ ಗಂಗೂಲಿ, ಕ್ರಿಕೆಟ್ ನನ್ನ ಜೀವನ. ಈ ಕ್ರೀಡೆಯು ನನಗೆ ಆತ್ಮವಿಶ್ವಾಸ ನೀಡಿದೆ. ಎಲ್ಲರ ಮುಂದೆ ತಲೆಯೆತ್ತಿ ನಡೆಯುವಂತೆ ಮಾಡಿದೆ. ಇದೀಗ ಅದೇ ಕಥೆಯನ್ನು ಲವ್ ಫಿಲಂಸ್ ಚಿತ್ರವಾಗಿಸುತ್ತಿದೆ. ನನ್ನ ಜೀವನವನ್ನು ದೊಡ್ಡ ಪರದೆಯಲ್ಲಿ ತೋರಿಸುತ್ತಿರುವ ಬಗ್ಗೆ ನಾನು ಕೂಡ ಥ್ರಿಲ್ ಆಗಿದ್ದೇನೆ ಎಂಬಾರ್ಥದಲ್ಲಿ ಟ್ವೀಟ್ ಮಾಡಿದ್ದಾರೆ.
ಇದಾಗ್ಯೂ ದಾದಾ ಅವರ ಪಾತ್ರದಲ್ಲಿ ಯಾರು ಕಾಣಿಸಿಕೊಳ್ಳಲಿದ್ದಾರೆ ಎಂಬುದೇ ಇದೀಗ ಕುತೂಹಲಕಾರಿ. ಏಕೆಂದರೆ ಕ್ರಿಕೆಟ್ ಅಂಗಳದ ಆಕ್ರಮಣಕಾರಿ ನಾಯಕ ಎಂದೇ ಬಿಂಬಿತರಾಗಿದ್ದ ಸೌರವ್ ಗಂಗೂಲಿ ಅವರ ಪಾತ್ರಕ್ಕೆ ನ್ಯಾಯ ಒದಗಿಸುವುದು ಕೂಡ ಅಂದುಕೊಂಡಷ್ಟು ಸುಲಭವಲ್ಲ. ಹೀಗಾಗಿ ಪ್ರತಿಭಾವಂತ ಹಾಗೂ ಜನಪ್ರಿಯ ನಟನನ್ನೇ ಆಯ್ಕೆ ಮಾಡಬೇಕಾದ ಅನಿವಾರ್ಯತೆ ನಿರ್ಮಾಣ ಸಂಸ್ಥೆ ಮುಂದಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss