ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಿಂದುಳಿದ ವರ್ಗದ ನಾನು ಮತ್ತೆ ಸಿಎಂ ಆಗಿದ್ಕೆ ಕೆಲವರಿಗೆ ಹೊಟ್ಟೆ ಉರಿ, ಇದನ್ನು ಸಹಿಸಿಕೊಳ್ಳೋಕೆ ಆಗ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ವಿಪಕ್ಷ ನಾಯಕರಿಗೆ ಟಾಂಗ್ ಕೊಟ್ಟಿದ್ದಾರೆ.
ಹೊಟ್ಟೆಕಿಚ್ಚಿನಿಂದ ಕೆಲವರು ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ನನ್ನ ಮೇಲೆ ಆರೋಪ ಮಾಡಲು ಬೇರೆ ಏನೂ ಇಲ್ಲ. ಹೀಗಾಗಿ ಕಾನೂನಾತ್ಮಕವಾಗಿ ನಡೆದಿರುವ ವಿಚಾರವನ್ನ ಅಕ್ರಮ ಎಂದು ಬಿಂಬಿಸುವ ಯತ್ನ ಮಾಡುತ್ತಿದ್ದಾರೆ. ಇದಕ್ಕೆಲ್ಲಾ ನಾನು ಹೆದರುತ್ತೀನಾ? ಇದರಿಂದ ನನ್ನನ್ನು ಹೆದರಿಸಲು ಸಾಧ್ಯನಾ? ಇಲ್ವೇ ಇಲ್ಲ ಎಂದು ಸಿಎಂ ಹೇಳಿದ್ದಾರೆ.