ವಿಶ್ವದ ಅತಿ ದೊಡ್ಡ ಚಾಕೊಲೇಟ್ ಫ್ಯಾಕ್ಟರಿಯಲ್ಲಿ ಬ್ಯಾಕ್ಟೀರಿಯಾ ಪತ್ತೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ವಿಶ್ವದ ಅತಿ ದೊಡ್ಡ ಚಾಕೊಲೇಟ್ ಫ್ಯಾಕ್ಟರಿಯಲ್ಲಿ ಸಲ್ಮೊನೆಲ್ಲಾ ಬ್ಯಾಕ್ಟೀರಿಯಾ ಪತ್ತೆಯಾಗಿದ್ದು, ಸದ್ಯ ಉತ್ಪಾದನೆಯನ್ನು ಸ್ಥಗಿತಗೊಳಿಸಲಾಗಿದೆ.
ಬೆಲ್ಜಿಯಂನ ವೈಜ್ ನಗರದಲ್ಲಿರುವ ಸ್ವಿಸ್ ದೈತ್ಯ ಬ್ಯಾರಿ ಕ್ಯಾಲೆಬಾಟ್ ನಡೆಸುತ್ತಿರುವ ಚಾಕೊಲೇಟ್ ಫ್ಯಾಕ್ಟರಿಯಲ್ಲಿ ಸಲ್ಮೊನೆಲ್ಲಾ ಬ್ಯಾಕ್ಟೀರಿಯಾ ಪತ್ತೆಯಾಗಿರುವುದು ಚಾಕೊಲೇಟ್ ಪ್ರಿಯರಿಗೆ ಆಘಾತ ತಂದಿದೆ. ಇದರಿಂದ ಚಿಕ್ಕ ಮಕ್ಕಳ ಮೇಲೆ ತುಂಬಾ ಪರಿಣಾಮ ಬೀರುತ್ತದೆ ಎನ್ನಲಾಗುತ್ತಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಕಂಪನಿ, ಪರೀಕ್ಷೆಯ ಬಳಿಕ ತಯಾರಿಸಲಾದ ಎಲ್ಲಾ ಉತ್ಪನ್ನಗಳನ್ನು ನಿರ್ಬಂಧಿಸಲಾಗಿದೆ. ಬ್ಯಾಕ್ಟೀರಿಯಾ ಕಂಡುಬಂದಂತೆ ಉತ್ಪನ್ನಗಳನ್ನು ಪಡೆದಿರುವ ಎಲ್ಲಾ ಗ್ರಾಹಕರನ್ನು ಸಂಪರ್ಕಿಸಲಾಗುತ್ತಿದೆ. ಮುಂದಿನ ಸೂಚನೆ ಬರುವವರೆಗೂ ಚಾಕೊಲೇಟ್ ಉತ್ಪಾದನೆಯನ್ನು ಸ್ಥಗಿತಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.
ಬ್ಯಾಕ್ಟೀರಿಯಾ ಕಂಡು ಬಂದಿರುವ ಫ್ಯಾಕ್ಟರಿ, ವಿಶ್ವದ ನಂ.1 ಚಾಕೊಲೇಟ್ ತಯಾರಿಕಾ ಕಂಪನಿ ಇದಾಗಿದ್ದು, 2020-2021 ಹಣಕಾಸು ವರ್ಷದಲ್ಲಿ 2 ಕೋಟಿ ಟನ್‌ಗಳಷ್ಟು ಉತ್ಪನ್ನಗಳು ಮಾರಾಟವಾಗಿವೆ. ಕಂಪನಿಯಲ್ಲಿ 13,000ಕ್ಕೂ ಹೆಚ್ಚು ಉದ್ಯೋಗಿಗಳಿದ್ದು, ಪ್ರಪಂಚದಾದ್ಯಂತ 60ಕ್ಕೂ ಹೆಚ್ಚು ಉತ್ಪಾದನಾ ಘಟಕಗಳಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!