ಹೊಸದಿಗಂತ ಡಿಜಿಟಲ್ ಡೆಸ್ಕ್:
ಎಟಿಎಂನಿಂದ ಹಣ ದೋಚಲು ಯತ್ನಿಸಿ ವಿಫಲವಾದ ದುಷ್ಕರ್ಮಿಗಳು, ನಂತರ ಎಟಿಎಂ ಯಂತ್ರವನ್ನೇ ಹೊತ್ಯೊಯ್ದಿರುವ ಘಟನೆ ಅತ್ತಿಬೆಲೆ ಠಾಣಾ ವ್ಯಾಪ್ತಿಯ ವಡ್ಡರ ಪಾಳ್ಯದಲ್ಲಿ ಸೋಮವಾರ ನಡೆದಿದೆ.
ಸೋಮವಾರ ಬೆಳಿಗ್ಗೆ ಕೆನರಾ ಬ್ಯಾಂಕ್ ಎಟಿಎಂಗೆ ಬಂದಿರುವ ಇಬ್ಬರು ದುಷ್ಕರ್ಮಿಗಳು, ಎಟಿಎಂನಲ್ಲಿದ್ದ ಹಣ ದೋಚಲು ಯತ್ನಿಸಿದ್ದಾರೆ. ಆದರೆ, ಅದು ಸಾಧ್ಯವಾಗದಿದ್ದಾಗ ಎಟಿಎಂ ಯಂತ್ರವನ್ನೇ ಹೊತ್ತೊಯ್ದಿದ್ದಾರೆ. ಈ ದೃಶ್ಯ ಸ್ಥಳೀಯ ಸಿಸಿ ಕ್ಯಾಮೆರಾದಲ್ಲಿ ರೆಕಾರ್ಡ್ ಆಗಿದೆ.
ಸ್ಥಳದಿಂದ ಯಂತ್ರದೊಂದಿಗೆ ತೆರಳಿರುವ ಕಳ್ಳರು, ಜನ ಸಂಚಾರ ಕಡಿಮೆ ಇದ್ದ ಮಂಚನಹಳ್ಳಿ ಸಮೀಪದ ನೀಲಗಿರಿ ತೋಪಿಗೆ ಬಂದು ಆಕ್ಸಲ್ ಬ್ಲೇಡ್ ನಿಂದ ಯಂತ್ರವನ್ನು ತುಂಡರಿಸಲು ಹಣ ತೆಗೆದುಕೊಳ್ಳಲು ಯತ್ನಿಸಿದ್ದಾರೆ. ಆದರೆ, ಅದು ವಿಫಲವಾಗಿದೆ. ಈ ನಡುವೆ ಬೆಳಿಗ್ಗೆ ಜನ ಸಂಚಾರ ಆರಂಭವಾದ ಕಾರಣ ಭಯಭೀತರಾಗಿ ಯಂತ್ರವನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ. ಎಟಿಎಂ ಯಂತ್ರದಲ್ಲಿ 10 ಲಕ್ಷಕ್ಕೂ ಹೆಚ್ಚು ಹಣವಿತ್ತೆಂದು ತಿಳಿದುಬಂದಿದೆ. ಸ್ಥಳೀಯ ಮಾಹಿತಿ ಮೇರೆಗೆ ಸ್ಥಳಕ್ಕೆ ಭೇಟಿ ನೀಡಿದ ಅತ್ತಿಬೆಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.