ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಸ್ ಟಿಕೆಟ್ ದರ ಏರಿಕೆ ಮಾಡಿ ಪ್ರಯಾಣಿಕರಿಗೆ ಬಿಸಿ ಮುಟ್ಟಿಸಿದ್ದ ಸರ್ಕಾರ ಇದೀಗ ಮದ್ಯ ಪ್ರಿಯರಿಗೆ ಶಾಕ್ ನೀಡಿದೆ. ಪ್ರಸಕ್ತ ಆರ್ಥಿಕ ವರ್ಷದ ಮೊದಲ 9 ತಿಂಗಳಲ್ಲಿ ಅಬಕಾರಿಯಿಂದ ನಿರೀಕ್ಷಿತ ಆದಾಯ ಬಾರದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಬಜೆಟ್ಗೆ ಮುನ್ನವೇ ಬಿಯರ್ ದರ ಏರಿಕೆ ಮಾಡಿದೆ.
ಪ್ರೀಮಿಯಂ ಮದ್ಯದ ಬಾಟಲ್ಗೆ ಕನಿಷ್ಠ 10 ರಿಂದ 50 ರೂ.ವರೆಗೆ ಹೆಚ್ಚಳವಾಗಲಿದೆ. ಪ್ರತಿ ಬಿಯರ್ನಲ್ಲಿನ ಅಲ್ಕೋಹಾಲ್ ಅಂಶದ ಮೇಲೆ ದರ ಏರಿಕೆಯಾಗಲಿದೆ. ಈ ಪರಿಷ್ಕೃತ ದರ ಜನವರಿ 20 ರಿಂದ ಜಾರಿಗೆ ಬರಲಿದೆ. ಭಾರತೀಯ ನಿರ್ಮಿತ ಮದ್ಯದ (ಐಎಂಎಲ್) ಮಾರಾಟವನ್ನು ರಾಜ್ಯದಲ್ಲಿ ಉತ್ತೇಜಿಸುವ ಸಲುವಾಗಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎನ್ನಲಾಗಿದೆ. ಐಎಂಎಲ್ ಮದ್ಯದ ಬೆಲೆ ಶೇ 25 ರಷ್ಟು ಕಡಿಮೆಯಾಗುವ ಸಾಧ್ಯತೆ ಇದೆ.