ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭಾ ಚುನಾವಣೆಯಲ್ಲಿ I.N.D.I.A ಮೈತ್ರಿಕೂಟ ನಿರೀಕ್ಷೆಗೂ ಮೀರಿ ಉತ್ತಮ ಫಲಿತಾಂಶ ಪಡೆದಿದ್ದು, ಅಂಕಿಅಂಶಗಳ ಪ್ರಕಾರ, 234 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿ ನೇತೃತ್ವದ ಎನ್‌ಡಿಎ 292 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
ಇತ್ತ I.N.D.I.A ಮೈತ್ರಿಕೂಟದಲ್ಲಿ ಸೇರ್ಪಡೆಗೊಂಡಿರುವ ಕಾಂಗ್ರೆಸ್, ಸಮಾಜವಾದಿ ಪಕ್ಷ, ತೃಣಮೂಲ ಕಾಂಗ್ರೆಸ್, ಶಿವಸೇನೆ (ಉದ್ಧವ್ ಬಣ), ಎನ್‌ಸಿಪಿ (ಶರದ್ ಪವಾರ್ ಬಣ) ನಂತಹ ಪಕ್ಷಗಳು ನಿರೀಕ್ಷೆಗಿಂತ ಹೆಚ್ಚಿನ ಯಶಸ್ಸನ್ನು ಕಾಣುತ್ತಿವೆ. ಆದರೆ ಆಮ್ ಆದ್ಮಿ ಪಾರ್ಟಿ ಮಾತ್ರ ದೆಹಲ್ಲಿಯಲ್ಲೇ ಸೋತು ಸಣ್ಣವಾಗುತ್ತಿದೆ. ತಿಹಾರ್ ಜೈಲಿನಲ್ಲಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ಗೆ ನಿಜಕ್ಕೂ ಇದು ಬ್ಯಾಡ್ ಟೈಂ ಎನ್ನಬಹುದು.
ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷ ಖಾತೆ ತೆರೆಯಲು ವಿಫಲವಾಗಿದೆ. ಪಂಜಾಬ್‌ನಲ್ಲೂ ಆಪ್ ಪ್ರದರ್ಶನವು ಉತ್ತಮವಾಗಿಲ್ಲ. ಪಂಜಾಬ್‌ನಲ್ಲಿ ಎಎಪಿ ಕೇವಲ 3 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಇತ್ತ ಆಕಾಂಗ್ರೆಸ್ ಚೇತರಿಕೆ ತೋರುತ್ತಿದೆ.