ಬಡಾ ಗ್ರಾಮ ಪಂಚಾಯತ್ ನ ತ್ಯಾಜ್ಯ ಘಟಕಕ್ಕೆ ಬೆಂಕಿ: 8 ಲಕ್ಷ ರೂ. ಗೂ ಅಧಿಕ ನಷ್ಟ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಉಚ್ಚಿಲ ಬಡಾ ಗ್ರಾಮ ಪಂಚಾಯತಿಯ ತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ಗುರುವಾರ ಮಧ್ಯಾಹ್ನ 4 ಗಂಟೆಯ ಸುಮಾರಿಗೆ ಬೆಂಕಿ ಅವಘಡ ಸಂಭವಿಸಿ 8 ಲಕ್ಷಕ್ಕೂ ಅಧಿಕ ಮೌಲ್ಯದ ಸೊತ್ತುಗಳು ಬೆಂಕಿಗೆ ಆಹುತಿಯಾಗಿದೆ.

ಪ್ಯಾಡ್ ಬರ್ನರ್ ಮತ್ತು ಪ್ಲಾಸ್ಟಿಕ್ ಮೋಲ್ಡಿಂಡಿಗ್ ಯಂತ್ರಗಳ ಮೌಲ್ಯ ಸುಮಾರು 4 ಲಕ್ಷದ 60 ಸಾವಿರ ಎಂದು ಪಿಡಿಓ ಸತೀಶ್ ಹೇಳಿದ್ದಾರೆ.

ಅಂತೆಯೇ ಕಟ್ಟಡ ಇನ್ನಿತರ ಪರಿಕರಗಳು ಸೇರಿ 8 ಲಕ್ಷಕ್ಕೂ ಅಧಿಕ ಮೌಲ್ಯದ ಸೊತ್ತು ಬೆಂಕಿಗೆ ಆಹುತಿಯಾಗಿದೆ ಎಂದು ಪಿಡಿಓ ಸತೀಶ್ ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಉಡುಪಿ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ, ಬೆಂಕಿ ನಂದಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!