ಬ್ಯಾಡಗಿ ಮೆಣಸಿನಕಾಯಿ ದರ ದಿಢೀರ್‌ ಕುಸಿತ: ರೈತರ ಪ್ರತಿಭಟನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬ್ಯಾಡಗಿ ಮೆಣಸಿನಕಾಯಿ ಬೆಲೆ ದಿಢೀರ್ ಕುಸಿತದಿಂದ ಆಕ್ರೋಶಗೊಂಡ ರೈತರು ಹಾವೇರಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಯನ್ನು ಹತೋಟಿಗೆ ತಂದ ಪೊಲೀಸರನ್ನೇ ರೈತರು ಅಟ್ಟಾಡಿಸಿದ್ದಾರೆ.

ಸೋಮವಾರ ರೈತರು ಬ್ಯಾಡಗಿಯ ಆಡಳಿತ ಭವನದ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಕಚೇರಿ ಮೇಲೆ ಕಲ್ಲು ಎಸೆದು ಗಾಜು ಮತ್ತು ಪೀಠೋಪಕರಣಗಳನ್ನು ಧ್ವಂಸ ಮಾಡಿದ್ದಾರೆ. ಅಲ್ಲದೇ ಕಾರಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆ ಚದುರಿಸಲು ಬಂದ ಪೊಲೀಸರನ್ನು ರೈತರು ಅಟ್ಟಾಡಿಸಿದ್ದಾರೆ. ಘಟನೆಯ ವೀಡಿಯೊ ವೈರಲ್ ಆಗಿದ್ದು, ಅಲ್ಲಿ 15 ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳು ಪ್ರತಿಭಟನಾಕಾರರನ್ನು ತಡೆಯಲು ಸಾಧ್ಯವಾಗದೆ ಸ್ಥಳದಿಂದ ಓಡುತ್ತಿರುವ ವಿಡಿಯೋ ವೈರಲ್ ಆಗಿದೆ.

ಕೈಯಲ್ಲಿ ಲಾಠಿ ಹಿಡಿದು ಪ್ರತಿಭಟನಾಕಾರರು ಪೊಲೀಸರನ್ನು ಬೆನ್ನಟ್ಟಿದರು. ಅಪಾಯದ ಭೀತಿಯಿಂದ ಪೊಲೀಸರು ಸ್ಥಳದಿಂದ ಓಡಿ ಹೋಗಿದ್ದಾರೆ. ಘಟನೆಯಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!