ಹೊಸದಿಗಂತ ಡಿಜಿಟಲ್ ಡೆಸ್ಕ್:
ಒಲಿಂಪಿಕ್ ಪದಕ ವಿಜೇತೆ, ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಇದೇ ಡಿ.22ರಂದು ಉದಯಪುರದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.
ಹೈದರಾಬಾದ್ ಮೂಲದ ಪೋಸಿಡೆಕ್ಸ್ ಟೆಕ್ನಾಲಜೀಸ್ ಎಂಬ ಖಾಸಗಿ ಕಂಪೆನಿಯ ಕಾರ್ಯನಿರ್ವಾಹಕ ನಿರ್ದೇಶಕರಾಗಿರುವ ವೆಂಕಟ ದತ್ತ ಸಾಯಿ ಅವರನ್ನು ವಿವಾಹವಾಗಲಿದ್ದಾರೆ.
ಈ ನಿಟ್ಟಿನಲ್ಲಿ ಸಿಂಧು ತಂದೆ ಪಿ.ವಿ.ರಮಣ ಅವರು ಡಿ.20ರಂದು ಮದುವೆ ಸಮಾರಂಭ ಆರಂಭವಾಗಲಿದ್ದು, ಡಿ.22ರಂದು ಉದಯಪುರದಲ್ಲಿ ವಿವಾಹ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ. ಡಿಸೆಂಬರ್ 24 ರಂದು ಹೈದರಾಬಾದ್‌ನಲ್ಲಿ ಆರತಕ್ಷತೆ ನಡೆಯಲಿದೆ ಎಂದು ಹೇಳಲಾಗಿದೆ.