October 18, 2026
Sunday, October 18, 2026
spot_img

ಬಾಗಲಕೋಟೆ, ದಾವಣಗೆರೆ ಟಿಕೆಟ್ ಫೈಟ್: ಹಳೇ ಕಹಿ ಮರೆತು ಮತ್ತೆ ಒಂದಾದ BJP ನಾಯಕರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಂಬರುವ ಉಪಚುನಾವಣೆ ಹಾಗೂ ವಿಧಾನ ಪರಿಷತ್ ಚುನಾವಣೆಗಳ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆಯು ಇಂದು ‘ಜಗನ್ನಾಥ ಭವನ’ದಲ್ಲಿ ನಡೆಯಿತು. ಸಭೆಯ ಬಳಿಕ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಕುರಿತು ಮಹತ್ವದ ಚರ್ಚೆ ನಡೆದಿದೆ ಎಂದು ತಿಳಿಸಿದರು.

ಆಕಾಂಕ್ಷಿಗಳ ಹೆಸರುಗಳನ್ನು ಅಂತಿಮಗೊಳಿಸಲಾಗಿದ್ದು, ಇಂದು ಅಥವಾ ನಾಳೆ ದೆಹಲಿಯ ವರಿಷ್ಠರಿಗೆ ಕಳುಹಿಸಿಕೊಡಲಾಗುವುದು.

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿನ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು, ಎಲ್ಲ ನಾಯಕರು ಒಟ್ಟಾಗಿ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಲು ತೀರ್ಮಾನಿಸಲಾಗಿದೆ. ಈ ನಿಟ್ಟಿನಲ್ಲಿ ಪ್ರಹ್ಲಾದ್ ಜೋಶಿ ಹಾಗೂ ಗೋವಿಂದ ಕಾರಜೋಳ ಅವರ ಸಮ್ಮುಖದಲ್ಲಿ ಆಕಾಂಕ್ಷಿಗಳೊಂದಿಗೆ ಮಾತುಕತೆ ನಡೆಸಲಾಗಿದೆ.

ಪಕ್ಷದ ಒಳಗಿನ ಅಸಮಾಧಾನಗಳ ಬಗ್ಗೆ ಪ್ರತಿಕ್ರಿಯಿಸಿದ ವಿಜಯೇಂದ್ರ, “ಅಸಮಾಧಾನಿತರಿಗೆ ಹೇಳಬೇಕಾದುದನ್ನು ನಾಲ್ಕು ಗೋಡೆಗಳ ಮಧ್ಯೆ ಸ್ಪಷ್ಟವಾಗಿ ತಿಳಿಸಿದ್ದೇವೆ,” ಎಂದು ಮಾರ್ಮಿಕವಾಗಿ ನುಡಿದರು.

ಈ ಸಭೆಯಲ್ಲಿ ರಾಜ್ಯ ಉಸ್ತುವಾರಿ ಡಾ. ರಾಧಾಮೋಹನ್ ದಾಸ್ ಅಗ್ರವಾಲ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ಪ್ರಮುಖ ನಾಯಕರು ಭಾಗವಹಿಸಿದ್ದರು.

Must Read